ವಚನಭ್ರಷ್ಟತೆ ಆರಂಭವಾಗಿದ್ದೇ ಎಚ್‌ಡಿಕೆ ಕಾಲದಲ್ಲಿ| ಕುಮಾರಸ್ವಾಮಿಯವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿರುವುದು ಸರಿಯಲ್ಲ: ಶಾಸಕ ಕೆ.ಎನ್.ರಾಜಣ್ಣ|
ತುಮಕೂರು(ಡಿ.21): ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದವೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಾತನ್ನು ಸಮರ್ಥಿಸಿಕೊಂಡಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಳ ಒಪ್ಪಂದಗಳ ಪ್ರಿನ್ಸಿಪಾಲ್ ಎಂದು ವ್ಯಂಗ್ಯವಾಡಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಒಳ ಒಪ್ಪಂದಗಳಿಗೆ ಕುಮಾರಸ್ವಾಮಿ ಹೆಸರುವಾಸಿ. ವಚನಭ್ರಷ್ಟತೆ ಆರಂಭವಾಗಿದ್ದೇ ಕುಮಾರಸ್ವಾಮಿಯವರ ಕಾಲದಲ್ಲಿ. ಹೀಗಾಗಿ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ಹೇಳುವುದಕ್ಕಾಗಿ ನಾನು ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸುದ್ದಿಗೋಷ್ಠಿ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.
ಖಾಸಗಿ ಶಾಲೆಗಳ ಸುಲಿಗೆಯಲ್ಲಿ ಸರ್ಕಾರ ಶಾಮೀಲು: ಬಿಎಸ್‌ವೈ ವಿರುದ್ಧ ಹರಿಹಾಯ್ದ ಸಿದ್ದು
ಇದೇ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ‘2013ರಲ್ಲಿ ಕೊರಟಗೆರೆಯಲ್ಲಿ ಪರಮೇಶ್ವರ್ ಸೋಲಿಗೆ ಯಾರು ಕಾರಣ ಎಂಬುದು ಗೊತ್ತಿಲ್ಲ. ಆದರೆ ಹಾಲಿ ಶಾಸಕರು ಹೇಗೆ ಕೆಲಸ ಮಾಡಿದ್ದಾರೆ ಎನ್ನುವ ಮೂಲಕ 2ನೇ ಬಾರಿಯ ಗೆಲುವು ನಿಂತಿರುತ್ತದೆ’ ಎಂದು ಮಾರ್ಮಿಕವಾಗಿ ಹೇಳಿದರು.