ಯಲ್ಲಮ್ಮ ದೇವಿಯ ದೇವಸ್ಥಾನ ನಿರ್ಮಿಸುವುದಾಗಿ ಹರಕೆ ಹೊತ್ತಿದ್ದ ಶಾಸಕ ಮಹೇಶ್ ಕುಮಟಳ್ಳಿ ಅಭಿಮಾನಿ ಮಹಾವೀರ ಪಡನಾಡವರು| ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಸಂಕೋನಟ್ಟಿಯಲ್ಲಿ ಯಲ್ಲಮ್ಮ ದೇವಿಯ ದೇವಸ್ಥಾನ ನಿರ್ಮಿಸಿದ ಅಭಿಮಾನಿ|
ಕಾಗವಾಡ(ನ.28): 2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಟಳ್ಳಿ ಜಯಿಸಿದರೆ ಸಂಕೋನಟ್ಟಿ ಗ್ರಾಮದಲ್ಲಿ ಯಲ್ಲಮ್ಮ ದೇವಿಯ ದೇವಸ್ಥಾನ ನಿರ್ಮಿಸುವುದಾಗಿ ಹರಕೆ ಹೊತ್ತಿದ್ದ ಮಹಾವೀರ ಪಡನಾಡವರು ದೇವಸ್ಥಾನ ನಿರ್ಮಿಸುವ ಮೂಲಕ ಶುಕ್ರವಾರ ತಮ್ಮ ಹರಕೆ ತೀರಿಸಿದ್ದಾರೆ.
ಶುಕ್ರವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಸಂಕೋನಟ್ಟಿಯಲ್ಲಿ ಯಲ್ಲಮ್ಮ ದೇವಿಯ ನೂತನ ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಕೊಳೆಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಇದಕ್ಕೆ ಸಾಕ್ಷಿಯಾದರು. ಜತೆಗೆ ಅವರೇ ಉದ್ಘಾಟಿಸಿದ್ದಾರೆ.
'ನನಗೆ ಸಚಿವ ಸ್ಥಾನ ಸಿಗದಿದ್ರೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಲು ತಯಾರಿದ್ದೇನೆ'
2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರಾರ್ಥವಾಗಿ ಬಂದಾಗ ಇಲ್ಲಿಯ ನಿವಾಸಿಗಳು ಯಲ್ಲಮ್ಮ ದೇವಸ್ಥಾನ ನಿರ್ಮಿಸಿ ಕೊಟ್ಟರೆ ಮಾತ್ರ ತಮ್ಮ ಪರವಾಗಿ ಮತ ಚಲಾಯಿಸುವುದಾಗಿ ಬೇಡಿಕೆ ಇಟ್ಟಾಗ ಮಹಾವೀರ ಪಡನಾಡರು ಅವರು ಮಹೇಶ್ ಕುಮಟಳ್ಳಿ ಅವರನ್ನು ಆಯ್ಕೆ ಮಾಡಿದ ನಂತರ ನನ್ನ ಸ್ವಂತ ಹಣದಲ್ಲಿ ದೇವಸ್ಥಾನ ನಿರ್ಮಿಸಿ ಕೊಡುವೆ ಎಂದು ಜನರಿಗೆ ಆಶ್ವಾಸನೆ ನೀಡಿದ್ದರು. ಜತೆಗೆ ದೇವಿಯ ಮುಂದೆ ಪ್ರತಿಜ್ಞೆ ಮಾಡಿದ್ದರು.