
ಚಿಕ್ಕಮಗಳೂರು[ಆ.24] ಸಿಎಂ ಕುಮಾರಸ್ವಾಮಿಗೆ ಶಾಸಕ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಿಲ್ಲೆಗೆ ಅಗಮಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಕೈ ಮುಗಿದು ಮನವಿ ಮಾಡಿಕೊಳ್ಳುತ್ತಿರುವುದು ಇದೀಗ ವೈರಲ್ ಆಗುತ್ತದೆ. ಮೂಡಿಗೆರೆ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯಹೂಡಿ ಪರಿಸ್ಥಿತಿ ಅವಲೋಕಿಸಬೇಕು ಎಂದು ಕೋರಿದ್ದಾರೆ.
ಮಲೆನಾಡಿನಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಕೊಡಗಿನಲ್ಲಿ ಭೀಕರ ಪ್ರವಾಹದ ಬಳಿಕ ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಭೂ ಕುಸಿತ ಮುಂದುವರೆದಿದೆ. ಕೊಪ್ಪ ತಾಲೂಕಿನ ಭೂತನಕಾಡು ಗ್ರಾಮದ ಮೈಸೂರು ಪ್ಲಾಂಟೇಷನ್’ನಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು ಒಂದು ಎಕರೆ ಇರುವ ತೋಟದಲ್ಲಿ 40 ಅಡಿ ಆಳಕ್ಕೆ ಭೂಮಿ ಕುಸಿದಿದ್ದು ವರದಿಯಾಗಿತ್ತು.