ಬಿಎಸ್ಪಿಯಿಂದ ನನಗೆ ಮೋಸವಾಗಿದೆ, ನನ್ನಿಂದ ಬಿಎಸ್ಪಿಗೆ ಮೋಸ ಆಗಿಲ್ಲ: ಮಹೇಶ್‌

By Kannadaprabha News  |  First Published Aug 7, 2021, 3:45 PM IST

*  ನನ್ನನ್ನು ಟ್ರೋಲ್‌ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತಿದೆ
*  ನಮ್ಮ ಮತ ಬ್ಯಾಂಕ್‌ ಯಾವುದು ನಮ್ಮನ್ನ ಬಿಟ್ಟು ಹೋಗಿಲ್ಲ
*  ನನ್ನನ್ನು ಟ್ರೋಲ್‌ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ
 


ಮೈಸೂರು(ಆ.07): ಬಿಎಸ್ಪಿಯಿಂದ ನನಗೆ ಮೋಸವಾಗಿದೆ. ನನ್ನಿಂದ ಬಿಎಸ್ಪಿ ಗೆ ಮೋಸ ಆಗಿಲ್ಲ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್‌. ಮಹೇಶ್‌ ತಿಳಿಸಿದ್ದಾರೆ. 

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ಪಿ ನನ್ನ ತಾಯಿ ಪಕ್ಷ ಎಂದು ಹೇಳಿದ್ದೆ. ಆದರೆ, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು? ಮಗ ಅನಾಥನಾಗಿದ್ದ, ಹೀಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ ಎಂದರು.

Tap to resize

Latest Videos

ಬಿಜೆಪಿ ಸೇರಿದ ಕೊಳ್ಳೇಗಾಲ ಶಾಸಕ ಮಹೇಶ್‌

ನನ್ನನ್ನು ಟ್ರೋಲ್‌ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತಿದೆ. ಬಿಎಸ್ಪಿ ಗೆಳೆಯರಿಗೆ ನಾನು ಹೇಳುವುದಿಷ್ಟು. ನನ್ನನ್ನು ಟ್ರೋಲ್‌ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನ ಬಿಎಸ್ಪಿ ಕಟ್ಟಲು ಬಳಸಿ. ನನ್ನನ್ನು ಟ್ರೋಲ್‌ ಮಾಡುತ್ತಿರುವವರಿಗೆ ಮಲೆ ಮಹದೇಶ್ವರ ಸ್ವಾಮಿ ಒಳೆಯದ್ದನ್ನ ಮಾಡಲಿ ಎಂದು ಅವರು ಪ್ರಾರ್ಥಿಸಿದರು.

ಅವತ್ತಿನ ರಾಜಕೀಯ ಸಂದರ್ಭಕ್ಕೆ ಹೇಳಿದ ಮಾತನ್ನ ಇವತ್ತಿನ ನೆಲೆಯಲ್ಲಿ ನಿಂತು ನೋಡಬಾರದು. ಹೋರಾಟಗಳ ವೇಳೆ ಹೇಳಿದ ಮಾತೇ ಬೇರೆ. ಅಧಿಕಾರ ಸ್ಥಾನಗಳಿಗೆ ಬಂದಾಗಿನ ಮಾತೇ ಬೇರೆ ಎಂಬುದು ನನಗೆ ಅರ್ಥವಾಗಿದೆ. ನಮ್ಮ ಮತ ಬ್ಯಾಂಕ್‌ ಯಾವುದು ನಮ್ಮನ್ನ ಬಿಟ್ಟು ಹೋಗಿಲ್ಲ. ನನಗೆ ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಕಾಂಗ್ರೆಸ್‌ನಲ್ಲಿ ಸ್ಥಾನಗಳು ಇಲ್ಲ. ಇದಿಲ್ಲದಿದ್ದರೆ ಚುನಾವಣಾ ರಾಜಕಾರಣ ಬಿಡಬೇಕಿತ್ತು. ಹೀಗಾಗಿ ಬಿಜೆಪಿ ಸೇರಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
 

click me!