ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಓಲೇಕಾರ| ಎರಡು ಸಲ ಎಸ್‌ಸಿ, ಎಸ್‌ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ| 8 ವರ್ಷ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿದ್ದೆ. ಈ ಸಲ ಸಚಿವನಾಗಬೇಕು ಎಂಬ ಅಭಿಲಾಷೆ ಹೊಂದಿದ್ದೇನೆ|
ಹಾವೇರಿ(ಡಿ.23): ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ರೇಣುಕಾಚಾರ್ಯ, ತಿಪ್ಪಾರೆಡ್ಡಿ ಬೆನ್ನಲ್ಲೇ ಈಗ ಶಾಸಕ ನೆಹರು ಓಲೇಕಾರ ಅವರೂ ಸಚಿವ ಸ್ಥಾನದ ಕುರಿತು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಸಹಜವಾಗಿಯೇ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಮುಖ್ಯಮಂತ್ರಿ ಅವರು ಸ್ಥಾನಮಾನ ಕೊಡುವ ನಿರೀಕ್ಷೆ ಇದೆ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಸಲ ಎಸ್‌ಸಿ, ಎಸ್‌ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. 8 ವರ್ಷ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿದ್ದೆ. ಈ ಸಲ ಸಚಿವನಾಗಬೇಕು ಎಂಬ ಅಭಿಲಾಷೆ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸಚಿವ ಸಂಪುಟದಲ್ಲಿ ಅವಕಾಶ ಕೊಟ್ಟರೆ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಅಭಿಮಾನ ಇದೆ. ಹೀಗಾಗಿ ಅವಕಾಶ ಮಾಡಿಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದರು.