ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ, ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ? ಎಂದ ಶಾಸಕ

Kannadaprabha News   | Asianet News
Published : Nov 19, 2020, 10:27 AM IST
ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ, ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ? ಎಂದ ಶಾಸಕ

ಸಾರಾಂಶ

ಕೊಪ್ಪಳ ಜಿಲ್ಲೆಗೂ ಸಚಿವ ಸ್ಥಾನ ಕೊಡಬೇಕು. ನಾನು ಬಿಜೆಪಿಯ ಹಿರಿಯ ಶಾಸಕರಾಗಿದ್ದು, ಸಂಪುಟ ಪುನರಚನೆ ಅಥವಾ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡಬೇಕೆಂದು ವರಿಷ್ಠರಿಗೆ ಒತ್ತಾಯಿಸುವುದಾಗಿ ತಿಳಿಸಿದ ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ(ನ.19): ನಾನೂ ನೂರಕ್ಕೆ ನೂರರಷ್ಟು ಸಚಿವ ಸ್ಥಾನದ ಆಕಾಂಕ್ಷಿ ಎಂದು ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಗೂ ಸಚಿವ ಸ್ಥಾನ ಕೊಡಬೇಕು. ನಾನು ಬಿಜೆಪಿಯ ಹಿರಿಯ ಶಾಸಕರಾಗಿದ್ದು, ಸಂಪುಟ ಪುನರಚನೆ ಅಥವಾ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡಬೇಕೆಂದು ವರಿಷ್ಠರಿಗೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ. 

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಮಂತ್ರಿಗಿರಿ ಕೇಳುವುದರಲ್ಲಿ ತಪ್ಪೇನಿದೆ: ಬಿಜೆಪಿ ಶಾಸಕ

ನಾನು ಎರಡು ಬಾರಿ ಶಾಸಕನಾಗಿದ್ದೇನೆ. ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ? ಕೊಪ್ಪಳ ಜಿಲ್ಲೆಯವರು ಯಾರೂ ಸಚಿವರಾಗಿಲ್ಲ. ಇಂತಹ ಸಂದರ್ಭದಲ್ಲಿ ತಮಗೆ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೇಳಿಕೊಳ್ಳುವುದಾಗಿ ತಿಳಿಸಿದ್ದಾರೆ. 

ನಮಗೆ ಬೇರೆಯವರ ಬಗ್ಗೆ ಅಸೂಯೆ ಇಲ್ಲ. ಆದರೆ ನಮ್ಮ ಜಿಲ್ಲೆಯವರನ್ನು ಮಂತ್ರಿ ಮಾಡಿ ಎಂದು ಒತ್ತಾಯಿಸುವುದಾಗಿ ಪರಣ್ಣ ಮುನವಳ್ಳಿ ತಿಳಿಸಿದರು. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ. 
 

PREV
click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಅಧಿವೇಶನದ ಮೊದಲ ದಿನವೇ ಕೇಬಲ್‌ ಆಪರೇಟರ್‌ಗಳಿಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್‌!