'ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸೆ ಬಗ್ಗೆ ಸಿಎಂ ಯಡಿಯೂರಪ್ಪಗೇ ನಂಬಿಕೆ ಇಲ್ಲ'

By Kannadaprabha News  |  First Published Aug 16, 2020, 3:32 PM IST

ಸಿಎಂ ಸೇರಿದಂತೆ ಹಲವು ಸಚಿವರಿಗೆ ಕೊರೋನಾ ಸೋಂಕು ತಗುಲಿತ್ತು. ಆದರೆ, ಯಾರೊಬ್ಬರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿಲ್ಲ. ಹೀಗಿರುವಾಗ ಜನಸಾಮಾನ್ಯರು ಹೇಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಡಬೇಕು? ಎಂದ ಶಾಸಕ ಪ್ರಿಯಾಂಕ್‌ ಖರ್ಗೆ 


ಕಲಬುರಗಿ(ಆ.16): ಸರ್ಕಾರಿ ಕೋವಿಡ್‌ ಆಸ್ಪತ್ರೆಗಳ ವ್ಯವಸ್ಥೆ ಮತ್ತು ಚಿಕಿತ್ಸೆ ಮೇಲೆ ಸ್ವತಃ ಸಿಎಂ ಯಡಿಯೂರಪ್ಪ ಮತ್ತು ಸಂಪುಟದ ಸಚಿವರಿಗೇ ನಂಬಿಕೆ ಇಲ್ಲ. ಹೀಗಾಗಿಯೇ ಸೋಂಕಿತರಾಗಿದ್ದಾಗ ಸಿಎಂ ಹಾಗೂ ಸಚಿವರು ತಮ್ಮದೇ ಸರ್ಕಾರದ ಆಸ್ಪತ್ರೆಗಳಿಗೆ ಸೇರಿಕೊಂಡು ಚಿಕಿತ್ಸೆ ಪಡೆಯದೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸೇರಿದಂತೆ ಹಲವು ಸಚಿವರಿಗೆ ಕೊರೋನಾ ಸೋಂಕು ತಗುಲಿತ್ತು. ಆದರೆ, ಯಾರೊಬ್ಬರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿಲ್ಲ. ಹೀಗಿರುವಾಗ ಜನಸಾಮಾನ್ಯರು ಹೇಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಡಬೇಕು? ಎಂದು ವಾಗ್ದಾಳಿ ನಡೆಸಿದರು.

Latest Videos

undefined

ಬೆಂಗಳೂರು ಗಲಭೆ ತಡೆಯೋ ಶಕ್ತಿ ಬಿಜೆಪಿ ಸರ್ಕಾರಕ್ಕಿದ್ದಿಲ್ಲವೇ? ಆಂದೋಲಶ್ರೀ

ಆರೋಗ್ಯ ಸಚಿವ ಶ್ರೀರಾಮಲು ಮಾತ್ರ ಎರಡು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಅದಾದ ಬಳಿಕ ಮುಂದಿನ ಚಿಕಿತ್ಸೆ ಎಲ್ಲಿ ಪಡೆದರೋ ಗೊತ್ತಿಲ್ಲ. ಆದರೆ, ಉಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು. ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಮೇಲೆ ಸಿಎಂ, ಸಚಿವರಿಗೇ ನಂಬಿಕೆ ಇಲ್ಲವಾದ ಕಾರಣ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆ ಮೊರೆ ಹೋಗಬೇಕಾಯಿತು. ಇಷ್ಟರ ಮಟ್ಟಿಗೆ ಸರ್ಕಾರ ವೈಫಲ್ಯ ಕಂಡಿದೆ ಎಂದು ಆರೋಪಿಸಿದರು.

ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಕೊರೋನಾ ವಿಚಾರದಲ್ಲಿ ಸರ್ಕಾರಕ್ಕಿಂತ ಕಾಂಗ್ರೆಸ್‌ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರ ಸರಿಯಾಗಿ ಕೊರೋನಾ ಸಮೀಕ್ಷೆ, ಸೋಂಕು ಪತ್ತೆ ಕೆಲಸ ಮಾಡುತ್ತಿಲ್ಲವೆಂದು ದೂರಿದರು.
 

click me!