ರಾಜಕೀಯ ಭವಿಷ್ಯ: 'ಯಡಿಯೂರಪ್ಪ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟ'

By Suvarna News  |  First Published Jan 12, 2020, 12:22 PM IST

ದಲಿತರು ಸಿಎಂ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ| ಬಿಜೆಪಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಸಿಎಂ ಸ್ಥಾನ ಸಿಗುತ್ತದೆ| ಬಿಜೆಪಿಯಿಂದಲೇ ದಲಿತರಿಗೆ ಒಳ್ಳೆ ಸ್ಥಾನ ಮಾನ ಸಿಗಲು ಸಾಧ್ಯ ಎಂದ ಶಾಸಕ ರಾಜುಗೌಡ| ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ದಲಿತರಿಗೆ ಸಿಎಂ ಹಾಗೂ ಡಿಸಿಎಂ ಸ್ಥಾನ ನೀಡಿಲ್ಲ| 


ಯಾದಗಿರಿ(ಜ.12): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟದ ಸ್ಥಾನ ಸಿಗಲಿದೆ ಎಂದು  ಸುರಪುರ ಬಿಜೆಪಿ ಶಾಸಕ ರಾಜೂಗೌಡ ಭವಿಷ್ಯ ನುಡಿದಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರು ಸಿಎಂ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ, ಬೇರೆ ಪಕ್ಷದಲ್ಲಿ ಆಗುವುದಿಲ್ಲ. ಈಗ ನಾವೆಲ್ಲ ಸಿಎಂ ಬಿಎಸ್ ವೈ ಹೆಸರಿನಲ್ಲಿ ಶಾಸಕರಾಗಿದ್ದೇವೆ ಅವರ ಅವಧಿ ಮುಗಿದ ನಂತರ ಬಿಜೆಪಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಸಿಎಂ ಸ್ಥಾನ ಸಿಗುತ್ತದೆ, ಬಿಜೆಪಿಯಿಂದಲೇ ದಲಿತರಿಗೆ ಒಳ್ಳೆ ಸ್ಥಾನ ಮಾನ ಸಿಗಲು ಸಾಧ್ಯ ಎಂದು ಹೇಳುವ ಮೂಲಕ ದಲಿತರ ಪರ ರಾಜುಗೌಡ ಬ್ಯಾಟಿಂಗ್ ಮಾಡಿದ್ದಾರೆ.

Latest Videos

undefined

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಾಂಗ್ರೆಸ್ ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಅಭಿವೃದ್ಧಿ ಕಾಳಜಿ ತೋರಿಲ್ಲ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ದಲಿತರಿಗೆ ಸಿಎಂ ಹಾಗೂ ಡಿಸಿಎಂ ಸ್ಥಾನವನ್ನಾದರೂ ನೀಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಹಲವಾರು ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ ಆದ್ರೆ, ದುಡಿದವರಿಗೆ ಸಿಎಂ ಸ್ಥಾನ ನೀಡಿಲ್ಲ, ಸಮ್ಮಿಶ್ರ ಸರಕಾರದ ಅನಿವಾರ್ಯ ಪರಿಸ್ಥಿತಿಯಲ್ಲಿ ಜಿ.ಪರಮೇಶ್ವರಗೆ  ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಆದ್ರೆ, 2013 ರಲ್ಲಿಯೇ ಪರಮೇಶ್ವರ ಅವರಿಗೆ  ಕಾಂಗ್ರೆಸ್ ಸಿಎಂ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದರು ಎಂದು ಹೇಳಿದ್ದಾರೆ. 
 

click me!