ಯಲ್ಲಾಪುರವನ್ನು ಬರಪೀಡಿತ ತಾಲೂಕೆಂದು ಘೋಷಿಸುವಂತೆ ಶಾಸಕ ಶಿವರಾಮ ಹೆಬ್ಬಾರ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಗೆ ಮಳೆಹಾನಿ ವೀಕ್ಷಣೆಗೆ ಆಗಮಿಸಿದ್ದ ಸಚಿವರು ಮಾರ್ಗಮಧ್ಯ ಯಲ್ಲಾಪುರಕ್ಕೆ ಭೇಟಿ ನೀಡಿದರು. ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಸನ್ಮಾನಿಸಿದರು. ಬಳಿಕ ಸಚಿವರು ಕಾರವಾರಕ್ಕೆ ತೆರಳಿದರು.
ಯಲ್ಲಾಪುರ (ಜು.11) : ಯಲ್ಲಾಪುರವನ್ನು ಬರಪೀಡಿತ ತಾಲೂಕೆಂದು ಘೋಷಿಸುವಂತೆ ಶಾಸಕ ಶಿವರಾಮ ಹೆಬ್ಬಾರ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಸಲ್ಲಿಸಿದರು.
ಉತ್ತರ ಕನ್ನಡ ಜಿಲ್ಲೆಗೆ ಮಳೆಹಾನಿ ವೀಕ್ಷಣೆಗೆ ಆಗಮಿಸಿದ್ದ ಸಚಿವರು ಮಾರ್ಗಮಧ್ಯ ಯಲ್ಲಾಪುರಕ್ಕೆ ಭೇಟಿ ನೀಡಿದರು. ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಸನ್ಮಾನಿಸಿದರು. ಬಳಿಕ ಸಚಿವರು ಕಾರವಾರಕ್ಕೆ ತೆರಳಿದರು.
undefined
ವಾಡಿಕೆ ಮಳೆಯಲ್ಲಿ ಶೇ.70 ಕೊರತೆ: 'ಬರಗಾಲ ಕ್ಷೇತ್ರ' ಘೊಷಣೆಗೆ ಶಿವರಾಮ್ ಹೆಬ್ಬಾರ್ ಆಗ್ರಹ
ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗದ ಸಂಕಷ್ಟಹೇಳ ತೀರದಾಗಿದೆ. ಮಳೆ ನಂಬಿ ಈಗಾಗಲೇ ಬಿತ್ತನೆ ಮಾಡಿದ್ದ ಬೆಳೆ ನಾಶವಾಗಿದ್ದು, ಇದರಿಂದ ರೈತರು ಸಾಕಷ್ಟುನಷ್ಟಅನುಭವಿಸುತಾಗಿದೆ. ಯಲ್ಲಾಪುರ, ಮುಂಡಗೋಡ, ಶಿರಸಿ ತಾಲೂಕಿನ ಪೂರ್ವ ಭಾಗದ ಬನವಾಸಿ ಹೋಬಳಿ ಪ್ರದೇಶಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಶಾಸಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಹಾಯಕ ಆಯುಕ್ತ ದೇವರಾಜ್, ಸಾಮಾಜಿಕ ಕಾರ್ಯಕರ್ತ ವಿಜಯ್ ಮಿರಾಶಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿದ್ಧಾಂತದಡಿ ಬೆಳೆದವರಿಂದಲೇ ಮೋಸ: ಶಾಸಕ ಶಿವರಾಮ ಹೆಬ್ಬಾರ್