ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿರುವ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಕಾಣೆಯಾಗಿದ್ದು ಹುಡುಕಿಕೊಡುವಂತೆ ಮುಂಡಗೋಡ ಪಟ್ಟಣ ಪಂಚಾಯ್ತಿ ಸದಸ್ಯನಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುಂಡಗೋಡ (ಫೆ.27): ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿರುವ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಕಾಣೆಯಾಗಿದ್ದು ಹುಡುಕಿಕೊಡುವಂತೆ ಮುಂಡಗೋಡ ಪಟ್ಟಣ ಪಂಚಾಯ್ತಿ ಸದಸ್ಯನಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಬರುತ್ತಾರೆಂದು ಕೊನೆವರೆಗೆ ಕಾದಿದ್ದರೂ ಆದರೆ ಮತದಾನಕ್ಕೆ ಗೈರಾಗುವ ಮೂಲಕ ಜೆಡಿಎಸ್ ಬಿಜೆಪಿ ಮೈತ್ರಿಗೆ ಶಾಕ್ ನೀಡಿದ್ದಾರೆ.
undefined
'ಕರ್ಕಶವಾದ ಲೌಡ್ ಸ್ಪೀಕರ್ ಅವನು..' ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್!
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಪಕ್ಷದೊಂದಿಗೆ ಎಲ್ಲೂ ಗುರುತಿಸಿಕೊಂಡಿರಲಿಲ್ಲ. ರಾಜ್ಯಸಭೆ ಚುನಾವಣೆವರೆಗೆ ಕಾದು ನೋಡುವ ತಂತ್ರ ಅನುಸರಿಸಿದ್ದ ಹೆಬ್ಬಾರ್ ಕಾಂಗ್ರೆಸ್ ನಾಯಕರೊಂದಿಗೆ ಗುಟ್ಟಾಗಿ ಓಡಾಟ ನಡೆಸಿದ್ದರು. ಇದೀಗ ರಾಜ್ಯಸಭೆ ಚುನಾವಣೆಗೆ ಅಂದುಕೊಂಡಂತೆ ಬಿಜೆಪಿಯ ಶಿವರಾಮ ಹೆಬ್ಬಾರ್, ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡಮತದಾನದ ಮೂಲಕ ಕಾಂಗ್ರೆಸ್ ಪಕ್ಷ ಸೇರಿದ್ದೇವೆ ಎಂಬ ಸಂದೇಶ ನೀಡಿದ್ದಾರೆ.
ಹೆಬ್ಬಾರ್ ನಿಮ್ಮ ಫೋನ್ ಸ್ವಿಚ್ ಆಫ್ ಬರ್ತಿದೆ; ಟಿವಿ ನೋಡ್ತಿದ್ರೆ ಬಂದು ಮೈತ್ರಿ ಅಭ್ಯರ್ಥಿಗೆ ಮತ ಹಾಕಿ: ಬಿಜೆಪಿ ಮನವಿ
ದೂರು ದಾಖಲಾಗ್ತಿದ್ದಂತೆ ಹೆಬ್ಬಾರ್ ಪ್ರತ್ಯಕ್ಷ
ಶಿವರಾಮ ಹೆಬ್ಬಾರ್ ಕಾಣೆಯಾದ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾರೆಂದು ದೂರು ದಾಖಲಾಗ್ತಿದ್ದಂತೆ ಇತ್ತ ಹೆಬ್ಬಾರ್ ಮುಂಡಗೋಡಿನಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಜ್ಯಸಭೆ ಚುನಾವಣೆ ಮುಕ್ತಾಯವಾಗ್ತಿದ್ದಂತೆ ಬೆಂಗಳೂರಿನಿಂದ ಮುಂಡಗೋಡಿಗೆ ಬಂದ ಶಾಸಕ ಹೆಬ್ಬಾರ್
ಮಂಗಳವಾರ ಮಧ್ಯಾಹ್ನ ನಿಧನರಾದ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಅವರ ಮನೆಗೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಕುಟುಬಸ್ಥರಿಗೆ ಸಾಂತ್ವನ ಹೇಳಿ ಬಂದಿದ್ದಾರೆ.