ಬಿ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದಲ್ಲಿ ವಾಲ್ಮೀಕಿ ಸಮಾಜಕ್ಕೆ ಹೆಚ್ಚು ಅನುಕೂಲ| ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಮಂತ್ರಿ ಮಾಡೋದು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ: ಸೋಮಶೇಖರ ರೆಡ್ಡಿ|
ಬಳ್ಳಾರಿ(ನ.18): ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿರುವ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದಲ್ಲಿ ವಾಲ್ಮೀಕಿ ಸಮಾಜಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಪುನರುಚ್ಚರಿಸಿದ್ದಾರೆ.
CAAಗೆ ಬೆಂಬಲಿಸದವರು ದೇಶದ್ರೋಹಿಗಳೇ: ಮತ್ತೊಮ್ಮೆ ಘರ್ಜಿಸಿದ ಸೋಮಶೇಖರ್ ರೆಡ್ಡಿ
ನಗರದಲ್ಲಿ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿರುವ ಶಾಸಕ ರೆಡ್ಡಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಮಂತ್ರಿ ಮಾಡೋದು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದಿದ್ದಾರೆ. ಯತ್ನಾಳ್ ಹಾಗೂ ಶ್ರೀರಾಮುಲು ಅವರು ಪ್ರತ್ಯೇಕ ಗುಂಪು ರಚಿಸಿಕೊಂಡಿದ್ದಾರೆ ಎಂಬ ಗುಮಾನಿಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಸೋಮಶೇಖರ ರೆಡ್ಡಿ, ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ ಎಂದು ತಿಳಿಸಿದರು.