ರಾಮಮಂದಿರ ಉದ್ಘಾಟನೆಗೆ ರಾಜ್ಯ ಸರ್ಕಾರ ರಜೆ ಕೊಡದಿದ್ದರೂ ಪರವಾಗಿಲ್ಲ, ಶಾಸಕ ಯಶ್ಪಾಲ್ ಸುವರ್ಣ ಉಡುಪಿ ಕ್ಷೇತ್ರದ ಜನತೆಗೆ ರಜೆ ಘೋಷಣೆ ಮಾಡಿದ್ದಾರೆ.
ಉಡುಪಿ (ಜ.21): ನಾಳೆ (ಜ.22ರಂದು) ದೇಶದಾದ್ಯಂತ ಹಬ್ಬದಂತೆ ಆಚರಣೆ ಮಾಡುತ್ತಿರುವ ರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನದಂದು ಸರ್ಕಾರದಿಂದ ರಜೆ ಕೊಡಲಿಲ್ಲ. ಆದರೆ, ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ. ಇದರ ಮುಂದುವರಿದ ಭಾಗವಾಗಿ ರಾಜ್ಯದ ಕೋಟ್ಯಂತರ ಹಿಂದೂಗಳ ಹಲವು ಶತಮಾನದ ಕನಸು ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣವು ಸಾಕಾರಗೊಂಡಿದೆ. ಇನ್ನು ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯನ್ನು ಹಬ್ಬದಂತೆ ಆಚರಣೆ ಮಾಡಲು ರಜೆ ಘೋಷನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಈ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಕಿಡಿಕಾರಿದ್ದಾರೆ.
undefined
ರಾಮ ಮಂದಿರ ಉದ್ಘಾಟನೆಗೆ ರಾಜ್ಯದಲ್ಲಿ ಸರ್ಕಾರಿ ರಜೆ ಕೊಡೊಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಈಗಾಗಲೇ ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಇನ್ನು ಕೇಂದ್ರ ಸರ್ಕಾರ ಕೂಡ ಎಲ್ಲ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡುವ ನೌಕರರಿಗೆ ಅರ್ಧ ದಿನದ ರಜೆಯನ್ನು ಘೋಷಣೆ ಮಾಡಿದೆ. ಆದರೆ, ಕರ್ನಾಟಕ ಸರ್ಕಾರ ಮಾತ್ರ ರಜೆ ಘೋಷಣೆ ಮಾಡಿಲ್ಲ. ಆದ್ದರಿಂದ ರಾಜ್ಯದ ಸಮಸ್ತ ರಾಮ ಭಕ್ತರು ತಮ್ಮ ಜೀವನದಲ್ಲಿ ದೊರೆತ ಈ ಪುಣ್ಯ ಪಾವನ ಕ್ಷಣವನ್ನು ಕಣ್ತುಂಬಿಕೊಳ್ಳಲು ಸ್ವಯಂ ರಜೆ ಪಡೆದು ಸಂಭ್ರಮದಲ್ಲಿ ಭಾಗಿಯಾಗಿಬೇಕು ಎಂದು ತಿಳಿಸಿದ್ದಾರೆ.
ಇನ್ನು ನಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಕಂಪನಿ ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಎಲ್ಲ ಉದ್ಯೋಗಿಗಳು ಹಾಗೂ ಸಾರ್ವಜನಿಕರು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಭಾಗಿಯಾಗಬೇಕು. ಹೀಗೆ ರಜೆ ಪಡೆದುಕೊಂಡ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆಗಳು ಹಾಗೂ ನೌಕರರಿಗೆ ಸರ್ಕಾರಿ ಇಲಾಖೆಗಳು ವ್ಯತಿರಿಕ್ತವಾಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾದರೆ ಶಾಸಕನಾಗಿ ವಿದ್ಯಾರ್ಥಿಗಳು ಮತ್ತು ನೌಕರರ ಜೊತೆಗೆ ನಿಂತುಕೊಂಡು ನ್ಯಾಯ ಒದಗಿಸಲು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.
ರಾಮ ಮಂದಿರ ಉದ್ಘಾಟನೆಗೆ ರಜೆ ಕೊಡದ ಸಿಎಂ ಸಿದ್ದರಾಮಯ್ಯ ರಾಮ ಭಕ್ತರಲ್ಲ, ರಹೀಂ ಭಕ್ತ: ಸಂಸದ ಪ್ರತಾಪ್ ಸಿಂಹ
ವಿದ್ಯಾರ್ಥಿಗಳೇ, ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ. ಸಿದ್ದರಾಮಯ್ಯ ಸರ್ಕಾರ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು… pic.twitter.com/iQd3sqzJoR
— Yashpal Anand Suvarna (@YashpalBJP)