* ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ
* ಜೆಡಿಎಸ್‌ನಲ್ಲಿ ಬೆಳೆಯುತ್ತಿದ್ದ ನಾಯಕರನ್ನು ಮೊಟಕುಗೊಳಿಸಲು ಉಚ್ಛಾಟನೆ
* ಜೆಡಿಎಸ್ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ
ಮೈಸೂರು(ಜು.03): ಅವರು ಯಾವುದೇ ಪಾಪ ಮಾಡಿಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳುವ ಮೂಲಕ, ಪಾಪದ ಕೊಡ ತುಂಬುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ತಾಲೂಕಿನ ಸೋಮೇಶ್ವರಪುರ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಕಾಂಗ್ರೆಸ್‌ನವರೇ 5 ಶಾಸಕರನ್ನು ಬಿಜೆಪಿಗೆ ಕಳಿಸಿದ್ದರು'
ಸಿದ್ದರಾಮಯ್ಯ ತಾವಾಗಿ ಜೆಡಿಎಸ್ ಬಿಡಲಿಲ್ಲ. ಜೆಡಿಎಸ್‌ನಲ್ಲಿ ಬೆಳೆಯುತ್ತಿದ್ದ ನಾಯಕರನ್ನು ಮೊಟಕುಗೊಳಿಸಲು ಉಚ್ಛಾಟನೆ ಮಾಡಲಾಯಿತು. ಜೆಡಿಎಸ್‌ನಿಂದ ಹೊರಬಂದ ಮೇಲೆ ಸಿದ್ದರಾಮಯ್ಯಗೆ ತುಂಬಾ ಒಳ್ಳೆಯದೇ ಆಗಿದೆ. ಈಗಲೂ ಒಳ್ಳೆಯದೇ ಆಗುತ್ತಿದೆ. ಜೆಡಿಎಸ್ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.