ವಿಶ್ವನಾಥ್‌ಗೆ ಸಚಿವ ಸ್ಥಾನ ವಿಚಾರ : ಸಾ.ರಾ ಮಹೇಶ್ ಹೊಸ ಬಾಂಬ್

By Kannadaprabha News  |  First Published Dec 2, 2020, 8:15 AM IST

ವಿಶ್ವನಾಥ್‌ಗೆ ಸಚಿವ ಸ್ಥಾನ ತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಯಾರು ಎನ್ನುವುದನ್ನು ಹೇಳಿದ್ದಾರೆ.


ಮೈಸೂರು (ಡಿ.02): ಎಚ್‌.ವಿಶ್ವನಾಥ್‌ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಮತ್ತು ಇಂತಹ ಅತಂತ್ರ ಸ್ಥಿತಿ ಅವರಿಗೆ ನಿರ್ಮಾಣವಾಗಲು ಸಚಿವ ಸ್ಥಾನಾಕಾಂಕ್ಷಿಯಾದ ಬಿಜೆಪಿ ಶಾಸಕರೇ ಕಾರಣ ಎಂದು ಶಾಸಕ ಸಾ.ರಾ. ಮಹೇಶ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

 ವಿಶ್ವನಾಥ್‌ಗೆ ಸಚಿವ ಸ್ಥಾನಕ್ಕೆ ಅರ್ಹರಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಹರಕೆ ತೀರಿಸಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಶಾಸಕರೊಬ್ಬರು ವಿಧಾನ ಪರಿಷತ್‌ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿಸಿದ್ದರಿಂದ ವಿಶ್ವನಾಥ್‌ಗೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

Tap to resize

Latest Videos

ವಿಶ್ವನಾಥ್‌ಗೆ ಕೋರ್ಟ್‌ ಶಾಕ್: ಚಾಲೆಂಜ್ ಆಗಿ ಸ್ವೀಕರಿಸುತ್ತೇವೆ ಎಂದ ಸಾಹುಕಾರ್...! ...

 ಇದರಿಂದ ಬಿಜೆಪಿಯವರು ಒಳಗೊಳಗೆ ಖುಷಿಪಟ್ಟಿದ್ದಾರೆ ಎಂದರು. ಅಂತಿಮವಾಗಿ ಸತ್ಯಕ್ಕೆ ಜಯ ದೊರೆಯುತ್ತದೆ. ಚಾಮುಂಡೇಶ್ವರಿ ಸನ್ನಿಧಾನಕ್ಕೆ ಪ್ರಮಾಣ ಮಾಡಲು ಬನ್ನಿ ಎಂದು ಕರೆದಾಗ ಬರಲಿಲ್ಲ. ಈಗ ಆ ದೇವರೇ ಶಿಕ್ಷೆ ಕೊಟ್ಟಿದ್ದಾರೆ. ನನಗೆ ನ್ಯಾಯ ದೊರಕಿದೆ ಎಂದರು.

click me!