Council Election : ಬಿಜೆಪಿ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ : ನಿಖಿಲ್‌ ಕುಮಾರಸ್ವಾಮಿ

By Kannadaprabha News  |  First Published Nov 24, 2021, 12:55 PM IST
  • ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್‌ ಬಿಜೆಪಿಯನ್ನು ಬೆಂಬಲಿಸುವ ಬಗ್ಗೆ ನನಗೆ ಗೊತ್ತಿಲ್ಲ - ನಿಖಿಲ್
  • ಆರು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್‌ ಸ್ಪರ್ಧಿಸಿರುವ ಕುರಿತು ಪಕ್ಷದ ವರಿಷ್ಠರು, ನಾಯಕರು ಸ್ಪಷ್ಟನೆ ನೀಡುತ್ತಾರೆ

ಮಂಡ್ಯ(ನ.24):  ಮೇಲ್ಮನೆ ಚುನಾವಣೆಯಲ್ಲಿ (MLC Election) ಜೆಡಿಎಸ್‌ (JDS) ಬಿಜೆಪಿಯನ್ನು (BJP) ಬೆಂಬಲಿಸುವ ಹಾಗೂ ಆರು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್‌ ಸ್ಪರ್ಧಿಸಿರುವ ಕುರಿತು ಪಕ್ಷದ ವರಿಷ್ಠರು, ನಾಯಕರು ಸ್ಪಷ್ಟನೆ ನೀಡುತ್ತಾರೆ. ನನಗೆ ಅದರ ಬಗ್ಗೆ ಗೊತ್ತೂ ಇಲ್ಲ. ಮಾತನಾಡುವುದೂ ಇಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ  ನಿಖಿಲ್‌ ಕುಮಾರಸ್ವಾಮಿ (Nikhil kumaraswamy) ಹೇಳಿದರು. ಜೆಡಿಎಸ್‌ ಅಭ್ಯರ್ಥಿ ಎನ್‌.ಅಪ್ಪಾಜಿ ಗೌಡರ (Appaji gowda) ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆರು ಕ್ಷೇತ್ರಗಳಲ್ಲಿ ಜೆಡಿಎಸ್‌ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರುವ ಕುರಿತು ಹೆಚ್‌.ಡಿ.ಕುಮಾರಸ್ವಾಮಿ (HD kumaraswamy) ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ (BJP) ಜೊತೆ ಚುನಾವಣಾ ಮೈತ್ರಿ ಬಗ್ಗೆ ನನಗೇನೂ ಗೊತ್ತಿಲ್ಲ. ವರಿಷ್ಠರನ್ನೇ ಕೇಳಬೇಕು ಎಂದು ಜಾರಿಕೊಂಡರು.

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾರಲ್ಲೂ ಒಡಕಿಲ್ಲ. ಅಪ್ಪಾಜಿ ಗೌಡ ಅವರು ಎರಡನೇ ಬಾರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಪಕ್ಷದ ವರಿಷ್ಠರು ಹಾಗೂ ಎಲ್ಲಾ ಶಾಸಕರೆಲ್ಲರೂ ಒಮ್ಮತದಿಂದ ಅವರನ್ನು ಆಯ್ಕೆ ಮಾಡಿದ್ದೇವೆ ಎಂದರು. ಪಕ್ಷದ ಅಭ್ಯರ್ಥಿ ಎನ್‌.ಅಪ್ಪಾಜಿಗೌಡರ ಪರ ನೂರಕ್ಕೆ ನೂರರಷ್ಟುಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ನಿಲ್ಲುವರೆಂಬ ಭರವಸೆ ಇದೆ ಎಂದು ಹೇಳಿದರು.

Latest Videos

ಜೆಡಿಎಸ್ ಬೆಂಬಲ : ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Election) ಎಲ್ಲಿ ಜೆಡಿಎಸ್‌ (JDS) ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲವೋ ಅಲ್ಲಿ ಬಿಜೆಪಿಯನ್ನು (BJP) ಜೆಡಿಎಸ್‌ ಬೆಂಬಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.

ಭಾನುವಾರ ಇಲ್ಲಿನ ಹಾಲಟ್ಟಿಬಳಿ ಇರುವ ಕವಟಗಿ ಮಠ ಫಾಮ್‌ ಹೌಸ್‌ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ ಅಭ್ಯರ್ಥಿಗಳು ಇಲ್ಲದ ಕಡೆ ಬಿಜೆಪಿಗೆ ಸಹಕಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಮಾಜಿ ಪ್ರಧಾಮಿ ಎಚ್‌.ಡಿ.ದೇವೇಗೌಡರಿಗೆ (HD Devegowda) ಮನವಿ ಮಾಡುವುದಾಗಿ ಹೇಳಿದರು.

ಅಭ್ಯರ್ಥಿಗಳ ಘೋಷಣೆ ಮಾಡುವ ಮೊದಲೇ ನಾಲ್ಕು ತಂಡಗಳ ಮೂಲಕ ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಬಿಜೆಪಿ ಜನ ಸ್ವರಾಜ್‌ (Jan Swaraj yatra) ಕಾರ್ಯಕ್ರಮ ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ನಾಯಕರು ಪ್ರಚಾರ ನಡೆಸಲಿದ್ದಾರೆ ಎಂದರು.

ಮ್ಯಾಚ್ ಫಿಕ್ಸಿಂಗ್ :  ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಪಕ್ಷಗಳು ಮ್ಯಾಚ್‌ ಫಿಕ್ಸಿಂಗ್‌ (match Fixing) ಮೂಲಕ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Election) ಗೆಲ್ಲಲು ಮುಂದಾಗಿವೆ ಎಂದು ಸಂಸದ ಡಿ.ಕೆ.ಸುರೇಶ್‌ (DK Suresh) ಆರೋಪಿಸಿದ್ದರು.  ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ರಾಮನಗರ (Ramanagara) ಜಿಲ್ಲಾ ಕಾಂಗ್ರೆಸ್‌ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಡಿಮೆ ಗ್ರಾಪಂಗಳಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಪಕ್ಷಗಳು ಪರಿಷತ್ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಳ್ಳಲು ಮುಂದಾಗಿವೆ ಎಂದು ದೂರಿದ್ದರು.

ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರ ತವರು ಜಿಲ್ಲೆಯಲ್ಲಿ ಮುಖಭಂಗ ಮಾಡುವ ಉದ್ದೇಶದಿಂದ ಬಿಜೆಪಿ  ಮತ್ತು ಜೆಡಿಎಸ್‌ ಯಾವ ಕ್ಷಣದಲ್ಲಿಯದರೂ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ (Congress) ಬೆಂಬಲಿತ ಸದಸ್ಯರು ಯಾವ ಆಸೆ ಆಮಿಷಗಳಿಗೆ ಒಳಗಾಗದೇ ಪಕ್ಷ ನಿಷ್ಠೆ ಮೆರೆಯಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ (Assembly Constituency) ವ್ಯಾಪ್ತಿಯಲ್ಲಿ ಬಹಳಷ್ಟು ಕಾಂಗ್ರೆಸ್‌ ಬೆಂಬಲಿತ ಗ್ರಾಪಂ ಸದಸ್ಯರಿದ್ದಾರೆ. ಅಲ್ಲದೇ ಹೆಚ್ಚಿನ ಗ್ರಾಮ ಪಂಚಾಯಿತಿಗಳು ಕೈ ವಶದಲ್ಲಿದೆ. ಕಾಂಗ್ರೇಸ್ಸಿಗರೆ ಅಧಿಕಾರ ಹಿಡಿದಿದ್ದಾರೆ. ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಚುನಾವಣೆಯನ್ನು (Election) ಗಂಭೀರವಾಗಿ ಪರಿಗಣಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಲೋಕಸಭೆ (Loksabha) ಹಾಗೂ ವಿಧಾನ ಸಭೆಗೆ ನಡೆದ ಉಪ ಚುನಾವಣೆಗಳ (By Election) ಫಲಿತಾಂಶವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ ಎಂಬುದನ್ನು ಸಾಭೀತು ಪಡಿಸಿದೆ. ಜನ ವಿರೋಧಿ ಬಿಜೆಪಿ ಸರಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದು ಜನರಿಂದಲೇ ಕೇಳಿಬರುತ್ತಿದೆ. ಆದ್ದರಿಂದ ಅನ್ಯ ಪಕ್ಷದವರನ್ನೂ ಕಾಂಗ್ರೆಸ್‌ಗೆ ಸೆಳೆದು ಅತ್ಯಧಿಕ ಮತಗಳಿಂದ ಅಭ್ಯರ್ಥಿ ಎಸ್‌.ರವಿ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

click me!