ಮೋದಿ ಸರ್ಕಾರ ರೈತರಿಗೆ ಮೋಸ ಮಾಡಿದೆ: ಆನೆಗುಂದಿ

By Kannadaprabha News  |  First Published Oct 11, 2022, 7:29 AM IST

ಬಿಜೆಪಿ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ಆನೆಗುಂದಿ 


ಶಹಾಪುರ(ಅ.11):  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿವೆ. ಭೂ ಸಾಗುವಳಿದಾರರಿಗೆ ಸಾಗುವಳಿ ಪತ್ರ ನೀಡದಿರುವ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚನ್ನಪ್ಪ ಆನೆಗುಂದಿ ಕರೆ ನೀಡಿದರು.

ನಗರದ ಹನುಮಾನ್‌ ದೇವಾಲಯದಲ್ಲಿ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ 3ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕಾರ್ಪೋರೆಟ್‌ ಕಂಪನಿಗಳ ಸಾಲ ಮನ್ನಾ ಮಾಡುವಲ್ಲಿ ತೋರುವ ಆಸಕ್ತಿಯನ್ನು ರೈತರ ಸಾಲ ಮನ್ನಾ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲ. ಇದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಸ್ವಾಮಿನಾಥನ್‌ ಆಯೋಗದ ವರದಿಯನ್ನು ಜಾರಿ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ರೈತರಿಗೆ ಮೋಸ ಮಾಡಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅಫಿಡೇವಿಟ್‌ ಸಲ್ಲಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

undefined

ಯಾದಗಿರಿ ಮತ್ತು ಮೈಸೂರಿನಲ್ಲಿ ಬೌದ್ಧ ಧರ್ಮದ ಮತಾಂತರಕ್ಕೆ ಮುಂದಾದ ಜನ

ಭೂಮಿಗಾಗಿ ವರ್ಷಗಳಿಂದ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡದೆ, ಕಾನೂನಿನ ನೆಪ ಹೇಳಿ ಸಾಗುವಳಿ ನಿರಾಕರಿಸುತ್ತಿದ್ದಾರೆ. ಆದರೆ, ಅದೇ ಸಾಗುವಳಿ ಭೂಮಿಯನ್ನು ಶ್ರೀಮಂತರಿಗೆ ದೊಡ್ಡ ದೊಡ್ಡ ಕಂಪನಿಗಳಿಗೆ ಕೊಡಲು ಮುಂದಾಗಿದೆ. ಈ ಭೂಗಳ್ಳ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಬೇಕಿದೆ ಎಂದರು.

ಜಿಲ್ಲೆಯಾದ್ಯಂತ ಬೆಳೆಹಾನಿಯಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆಸ್ತಿ-ಪಾಸ್ತಿ ಮಾರಿದರು ಸಾಲ ತೀರದಂತಾಗಿದ್ದು, ರೈತರ ದಿವಾಳಿಗೆ ಸರ್ಕಾರವೇ ಕಾರಣವಾಗಿದೆ. ರೈತರ ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡದೆ, ದಲ್ಲಾಳಿಗಳ, ಕಾರ್ಪೊರೇಟ್‌ ಕಂಪನಿಗಳ ಪರವಾಗಿದೆ. ಸರ್ಕಾರ ವೈಜ್ಞಾನಿಕ ಬೆಲೆ ನೀಡದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.

ವಿಧಾನಸಭೆ ಚುನಾವಣೆಗೆ ಇನ್ನು 6 ತಿಂಗಳು ಇರುವಾಗಲೇ ಕಾಂಗ್ರೆಸ್‌ ಟಿಕೆಟ್‌ಗೆ ಫೈಟ್..!

ಸ್ವಾಮಿನಾಥನ್‌ ವರದಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ. ಕೂಡಲೇ ಸಂಸತ್‌ ಅಧಿವೇಶನದಲ್ಲಿ ರೈತರಿಗೆ ಋುಣಮುಕ್ತ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿರುವ ಎಲ್ಲಾ ತರದ ಸಾಲ ಮನ್ನಾ ಮಾಡಬೇಕು. ರಾಜ್ಯ ಸರ್ಕಾರ ಕೂಡ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕಳೆದ ವರ್ಷದ ಬೆಳೆ ವಿಮೆ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು. ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.

ಹಿರಿಯ ಸಾಹಿತಿ ಶಿವಣ್ಣ ಇಜೇರಿ ಮತ್ತು ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್‌.ಎಂ. ಸಾಗರ್‌ ಮಾತನಾಡಿದರು. ರೈತ ಮುಖಂಡ ಸಿದ್ದಯ್ಯ ಹಿರೇಮಠ, ಧರ್ಮಣ್ಣ ದೊರೆ, ಭೀಮರಾಯ ಟಪ್ಪೇದಾರ್‌, ಭೀಮರಾಯ ಬಂಗಾರಿ ಸೇರಿದಂತೆ ಅನೇಕ ರೈತ ಮುಖಂಡರು ಇದ್ದರು.
 

click me!