ಕೇರಳದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ, ರೋಗ ಲಕ್ಷಣ ಕಂಡುಬಂದರೆ ವೆನ್ಲಾಕ್ ಆಸ್ಪತ್ರೆ ದಾಖಲಿಸುವಂತೆ ಕಟ್ಟುನಿಟ್ಟಾಗಿ ಸೂಚನೆ
ಮಂಗಳೂರು (ಜು.20): ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕೇರಳಕ್ಕೆ ರಸ್ತೆ ಮಾರ್ಗವಾಗಿ ಸಂಚರಿಸುವುದರಿಂದ ಮಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿಗೆ ಮಂಕಿ ಪಾಕ್ಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Mangaluru International Airport)ದ ಕಾನ್ಫರೆನ್ಸ್ ಹಾಲ್ (Conference Hall)ನಲ್ಲಿ ಮಂಗಳವಾರ ಮಂಕಿಪಾಕ್ಸ್(Monkeypox) ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ಮಂಗಳೂರಿಗ! ಯಾರಿವರು? ಹಿನ್ನೆಲೆ
ಏರ್‌ಲೈನ್ಸ್(Airlines) ಸಿಬ್ಬಂದಿ ವಿಮಾನ ಲ್ಯಾಂಡಿಂಗ್(Flight landing) ಆಗುವ ಮೊದಲೇ ವಿಮಾನದಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳು ಇರುವವರನ್ನು ಪತ್ತೆ ಹಚ್ಚಬೇಕು. ಆ ಲಕ್ಷಣಗಳುಳ್ಳವರು ಕಂಡು ಬಂದರೆ ಅವರನ್ನು ಪ್ರತ್ಯೇಕಿಸಬೇಕು ಹಾಗೂ ವಿಮಾನ ನಿಲ್ದಾಣದಲ್ಲಿರುವ ಆರೋಗ್ಯಾಧಿಕಾರಿಗಳಿಂದ ತಪಾಸಣೆ ಮಾಡಿಸಬೇಕು. ವಿಮಾನ ಲ್ಯಾಂಡ್ ಆದ ಮೇಲೆ ಪ್ರಯಾಣಿಕರನ್ನು ಮೇಲ್ವಿಚಾರಣೆ ಮಾಡುವ ಸಿಬ್ಬಂದಿ, ಜ್ವರ ಹಾಗೂ ಚರ್ಮದ ಗುಳ್ಳೆಯ ಬಗ್ಗೆ ಪ್ರಯಾಣಿಕರಿಂದ ಖಚಿತ ಪಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿರುವ ಪ್ರಯಾಣಿಕರನ್ನು (ಸಂಶಯಾಸ್ಪದ) ಪ್ರತ್ಯೇಕಿಸಿ ಆಂಬುಲೆ®್ಸ…ನಲ್ಲಿ ಈಗಾಲೇ ವೆನ್‌ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ತೆರೆಯಲಾದ ಮಂಕಿ ಫಾP್ಸ… ಐಸೋಲೇಶನ್ ವಾರ್ಡ್‌ಗೆ ದಾಖಲಿಸುವಂತೆ ಸೂಚಿಸಿದರು.
ಮಂಕಿ ಪಾಕ್ಸ್ ಹರಡದಂತೆ ಜಾಗೃತಿ ಮೂಡಿಸುವ ಕನ್ನಡ, ಮಲಯಾಳಂ(malayalam), ಹಿಂದಿ(Hindi), ಇಂಗ್ಲಿಷ್(English) ಭಾಷೆಯಲ್ಲಿ ಐಇಸಿ ಸ್ಟ್ಯಾಂಡಿ(IEC standi)ಗಳನ್ನು ಸಿದ್ಧಪಡಿಸಲು ಮಾಹಿತಿ ನೀಡುವಂತೆ ಜಿಲ್ಲೆಯ ಕೋವಿಡ್()Covid ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗೆ ತಿಳಿಸಿದ ಜಿಲ್ಲಾಧಿಕಾರಿ, ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಟ್ಯಾಂಡಿಗಳನ್ನು ತಯಾರಿಸಿ ವಿವಿಧ ಸ್ಥಳಗಳಲ್ಲಿ ಪ್ರರ್ದಶಿಸುವಂತೆ ಸೂಚಿಸಿದರು.
ಮಂಕಿ ಪಾಕ್ಸ್ ಜಾಗೃತಿ ಮೂಡಿಸುವ ವಿವಿಧ ಫೋಟೋಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್ ಮಾಡಲು ವಿಮಾನ ನಿಲ್ದಾಣ ಆರೋಗ್ಯಾಧಿಕಾರಿ ಹಾಗೂ ಏರ್ ಲೈನ್ಸ್ ಅಧಿಕಾರಿಗೆ ನಿರ್ದೇಶನ ನೀಡಿದರು.
ಮಂಗಳೂರು ಪಾಲಿಕೆ: ಗೃಹ ಬಳಕೆ ನೀರಿನ ದರ ಇಳಿಕೆ ಆದೇಶ
ಮಂಕಿ ಪಾಕ್ಸ್ ಬಗ್ಗೆ ಕ್ಯಾಬ್ ಚಾಲಕರಿಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಅರಿವು ಮೂಡಿಸಬೇಕು. ವಿಮಾನ ನಿಲ್ದಾಣದ ಡಿಜಿಟಲ್ ಡಿಸ್ಪೆ$್ಲೕಯಲ್ಲಿ ಹಾಗೂ ಮೈಕ್ ಮೂಲಕ ಅರಿವು ಮೂಡಿಸಬೇಕು, ಮಂಕಿ ಪಾಕ್ಸ್ ಹರಡದಂತೆ ಜಿಲ್ಲಾಡಳಿತ ಸಾಕಷ್ಟುಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ. ಜನರು ಭಯಭೀತರಾಗದೆ ಅರಿವು ಮೂಡಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಡಾ.ರಾಜೇಂದ್ರ ಕೆ.ವಿ. ಕೋರಿದರು.
ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಬಿ.ವಿ., ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಕೆ., ವಿಮಾನ ನಿಲ್ದಾಣದ ಹೆಡ್ ಆಪರೇಷನ್ ಆಫಿಸರ್ ಶ್ರೀಕಾಂತ್ ಟಾಟಾ, ವಿಮಾನ ನಿಲ್ದಾಣ ವೈದ್ಯಾಧಿಕಾರಿ ಡಾ. ನಿಶಿತ, ಏರ್‌ಲೈ®್ಸ… ಮುಖ್ಯಸ್ಥರು, ಕಸ್ಟಮ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.