ಚಿಕ್ಕಮಗಳೂರು ರಸ್ತೆಯಲ್ಲಿ ಉರುಳಿದ ಬೃಹತ್ ಮರ : ಟ್ರಾಫಿಕ್ಕಲ್ಲಿ ಸಿಲುಕಿದ ತೇಜಸ್ವಿ ಸೂರ್ಯ

By Web Desk  |  First Published Jun 12, 2019, 1:17 PM IST

ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹಲವೆಡೆ ಗಾಳಿಯಿಂದ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿವೆ. 


ಚಿಕ್ಕಮಗಳೂರು  : ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಲೆನಾಡು ಪ್ರದೇಶದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. 

ಕಾಫಿನಾಡಿನ ಹಲವೆಡೆ ವರುಣ ಅಬ್ಬರಿಸುತಿದ್ದ, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾರೀ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

Tap to resize

Latest Videos

ಧಾರಾವಕಾರವಾಗಿ ಮಳೆ, ಬಿರುಗಾಳಿಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಬಾಳೆಹೊನ್ನೂರು - ಚಿಕ್ಕಮಗಳೂರು ರಸ್ತೆಯಲ್ಲಿ ಭಾರಿ ಮರವೊಂದು ಉರುಳಿ ಬಿದ್ದಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು. 

ಬಾಳೆಹೊನ್ನೂರಿನ ಕಣತಿ ಬಳಿ ರಸ್ತೆಗೆ ಮರ ಉರುಳಿ ಬಿದ್ದು, ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ನಿಲ್ಲುವಂತಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಯಿತು. 

ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಟ್ರಾಫಿಕ್ ನಲ್ಲಿ ಸಿಲುಕಿದ್ದರು. 

ಇನ್ನು ರಸ್ತೆಯಲ್ಲಿ ಬಿದ್ದಿದ್ದ ಮರವನ್ನು ಸ್ಥಳೀಯರ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸಿದರು.

click me!