ಡ್ಯಾಂಗಳಿಂದ ಕೃಷ್ಣೆಗೆ ಹರಿದುಬಂತು ಅಪಾರ ನೀರು

By Kannadaprabha NewsFirst Published Aug 21, 2020, 8:16 AM IST
Highlights

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮುಂಗಾರು ಅಬ್ಬರಿಸುತ್ತಿದ್ದು, ಇದೀಗ ಕೊಂಚ ಮಟ್ಟಿನ ಬಿಡುವು ನೀಡಿದೆ. ಉತ್ತರಜಿಲ್ಲೆಗಳಲ್ಲಿಯೂ ವರುಣ ಕ್ಷೀಣಿಸಿದ್ದಾನೆ. ಆದರೆ ವಿವಿಧ ಡ್ಯಾಂಗಳಿಂದ ಕೃfಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ ಮಾತ್ರ ಅತ್ಯಧಿಕವಾಗಿದೆ.

  ಬೆಳಗಾವಿ(ಆ.21):  ರಾಜ್ಯದಲ್ಲಿ ಮಳೆ ಇಳಿಮುಖವಾದ ಬೆನ್ನಲ್ಲೇ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲೂ ಮಳೆ ಸಂಪೂರ್ಣ ತಗ್ಗಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರುಸುತ್ತಿರುವ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಪಾತ್ರದ ನಿವಾಸಿಗಳು ನಿರಾಳವಾಗಿದ್ದಾರೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ 2.17 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿರುವುದರಿಂದ ನದಿ ಅಪಾಯದ ಮಟ್ಟದಲ್ಲೇ ಹರಿಯುತ್ತಿದೆ.

ಇದೇ ವೇಳೆ ತುಂಗಭದ್ರಾ ಮತ್ತು ಮಲಪ್ರಭಾ ಜಲಾನಯನ ಪ್ರದೇಶದಲ್ಲೂ ಮಳೆ ತಗ್ಗಿರುವುದರಿಂದ ಗದಗ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ನದಿ ನೀರಿನ ಮಟ್ಟಇಳಿಮುಖವಾಗಿದೆ. ಮುಳುಗಡೆಯಾಗಿದ್ದ ಹಂಪಿಯ ಸ್ಮಾರಕಗಳಲ್ಲಿ ಕೆಲವು ಗೋಚರಿಸುತ್ತಿದ್ದು, ಜನಜೀವನವೂ ನಿಧಾನಗತಿಯಲ್ಲಿ ಸಹಜಸ್ಥಿತಿಯತ್ತ ಮರಳುತ್ತಿದೆ. ಏತನ್ಮಧ್ಯೆ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದ್ದರೆ, ಕೊಡಗಿನ ಕೆಲಭಾಗಗಳಲ್ಲಿ ಸಾಧಾರಣ ಮಳೆ ಸುರಿದಿದೆ.

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ.

ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಿದ್ದು 2.17 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದ್ದು ಆಲಮಟ್ಟಿಜಲಾಶಯದಿಂದ 2.51 ಲಕ್ಷ ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಇನ್ನು ಬಸವಸಾಗರದಿಂದ 2.70 ಲಕ್ಷ ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಅದೇ ರೀತಿ ಘಟಪ್ರಭ ಜಲಾಶಯಕ್ಕೆ 31 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಮುನ್ನೆಚ್ಚರಿಕೆಯಾಗಿ 35 ಸಾವಿರ ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ. 

ಸಚಿವರ ಚಪ್ಪಲಿ ಸೆಳೆದು ಹಿಂತಿರುಗಿಸಿದ ಸಮುದ್ರ!...

ಬೆಳಗಾವಿಯ ಖಾನಾಪುರ ತಾಲೂಕಿನ ಭಾಗದಲ್ಲಿ ಮಳೆ ಕಡಿಮೆಯಾಗಿದ್ದರಿಂದ ನವಿಲು ತೀರ್ಥ ಜಲಾಶಯಕ್ಕೆ ಹರಿದು ಬರುತ್ತಿರುವ ನೀರು 7 ಸಾವಿರದಿಂದ 5 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಗಿದೆ. ಹೀಗಾಗಿ ಕೇವಲ 3900 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇಷ್ಟಾಗಿದ್ದರೂ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಟ್ಟು 31ಕ್ಕೂ ಅಧಿಕ ಸೇತುವೆಗಳು ಸಂಪರ್ಕ ಕಡಿತಗೊಂಡಿದ್ದು, ಶುಕ್ರವಾರ ಮೂರು ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ

click me!