48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ನೀಡಿದೆ.
ಬೆಂಗಳೂರು [ಸೆ.06]: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರದಿಂದ ಕೇರಳದ ನಡುವೆ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಗುರುವಾರ ಸ್ವಲ್ಪ ಮಳೆಯ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ನೀಡಲಾಗಿದ್ದ ರೆಡ್ ಅಲರ್ಟ್ ಹಿಂಪಡೆಯಲಾಗಿದೆ.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಆದರೆ, ಇನ್ನೂ ಎರಡು ದಿನ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ 115ರಿಂದ 205 ಮಿ.ಮೀ ವರೆಗೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗಿನ ಮಡಿಕೇರಿಯಲ್ಲಿ ಅತಿ ಹೆಚ್ಚು 14 ಸೆಂ.ಮೀ. ಮಳೆಯಾದ ವರದಿಯಾಗಿದೆ.