ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿಗಿಂತ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುತ್ತಿರುವ ಸಾವು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು (ಅ.23): ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿಗಿಂತ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುತ್ತಿರುವ ಸಾವು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಳವಳ ವ್ಯಕ್ತಪಡಿಸಿದರು. ವಿಶ್ವ ಪಾಶ್ರ್ವವಾಯು ದಿನದ ಅಂಗವಾಗಿ ಬೆಂಗಳೂರು ಪಾಶ್ರ್ವವಾಯು ಸೇವಾ ಸಂಘವು ಶನಿವಾರ ಬೆಂಗಳೂರು ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಶೇ.70ರಷ್ಟು ಪ್ರಕರಣಗಳು ಬಡತನ ರೇಖೆಗಿಂತ ಕೆಳಗಡೆ, ಮಧ್ಯಮ ವರ್ಗದವರಲ್ಲಿ ಅಧಿಕ ರಕ್ತದೊತ್ತಡ ಕಾಣಿಸಿಕೊಳ್ಳುತ್ತಿದೆ.
ಇದರಿಂದ ಇತರೆ ಕಾಯಿಲೆಗಳಿಗೆ ಹೋಲಿಸಿದರೆ ದೇಶದಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಾದ ಖಿನ್ನತೆ, ರಕ್ತದೊತ್ತಡ, ಮಧುಮೇಹಕ್ಕೆ ಒಳಗಾಗುತ್ತಿರುವವರು ಮತ್ತು ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಅಸಾಂಕ್ರಮಿಕ ರೋಗಗಳು ಬಡ ಹಾಗೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಇದು ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ ಎಂದು ತಿಳಿಸಿದರು. ಪಾಶ್ರ್ವವಾಯುವಿಗೆ ಮೊದಲ ಕಾರಣವೇ ರಕ್ತದೊತ್ತಡವಾಗಿದೆ. ಎಷ್ಟುರಕ್ತದೊತ್ತಡ ಕಡಿಮೆ ಮಾಡುತ್ತೇವೆಯೋ ಅಷ್ಟು ಪಾಶ್ರ್ವವಾಯುವಿಗೆ (ಸ್ಟ್ರೋಕ್) ಒಳಗಾಗುವವರ ಸಂಖ್ಯೆ ಕಡಿಮೆಯಾಗುತ್ತಿದೆ.
ಕಾಂಗ್ರೆಸ್ ಭಾರತ್ ಜೋಡೋ ಮಾಡ್ಕೊಂಡು ಒಂದೆರಡು ರಾಜ್ಯವಾದ್ರೂ ಉಳಿಸಿಕೊಳ್ಳಲಿ: ಸಚಿವ ಡಾ. ಸುಧಾಕರ್
ಜೀವನ ಶೈಲಿ, ಆಹಾರ ಪದ್ಧತಿ, ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ಪಾಶ್ರ್ವವಾಯುನಿಂದ ತಪ್ಪಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟುಕ್ರಮಗಳನ್ನು ಕೈಗೊಂಡಿವೆ. ರೋಗ ಬಂದ ಮೇಲೆ ಚಿಕಿತ್ಸೆ ನೀಡುವುದಕ್ಕಿಂತ ರೋಗ ಬಾರದೆ ಇರುವ ಹಾಗೇ ನೋಡಿಕೊಳ್ಳುವುದೇ ಉತ್ತಮ.ಹೀಗಾಗಿ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಗಳು ಸರ್ಕಾರದಿಂದಲೇ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಉತ್ತರ ಕನ್ನಡದಲ್ಲಿ ಶೀಘ್ರವೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಡಾ.ಕೆ.ಸುಧಾಕರ್
ಪಾಶ್ರ್ವವಾಯು ಚೇತರಿಕೆಗೆ ದಾದಿಯರ ಆರೈಕೆ ಮುಖ್ಯ: ಪಾಶ್ರ್ವವಾಯು ಆದಾಗ ಸಮಯ ಪ್ರಜ್ಞೆ ತುಂಬಾ ಪ್ರಮುಖ. ವೈದ್ಯರ ಬಳಿ ಶೀಘ್ರ ತಲುಪಿದರೆ ಹಾನಿ ಕಡಿಮೆಯಾಗುತ್ತದೆ. ಆರೈಕೆ ಹಾಗೂ ಚಿಕಿತ್ಸೆ ಎರಡೂ ಕೂಡ ಸರಿಯಾದ ಕ್ರಮದಲ್ಲಿ ಹಾಗೂ ಸರಿಯಾದ ಸಮಯಕ್ಕೆ ಸಿಕ್ಕರೆ ಬೇಗನೆ ಗುಣಮುಖವಾಗಲು ಸಾಧ್ಯವಾಗುತ್ತದೆ. ರೋಗಿಗೆ ವೈದ್ಯರು ಚಿಕಿತ್ಸೆ ಮಾತ್ರ ನೀಡುತ್ತಾರೆ. ಆದರೆ, ಆರೈಕೆಯನ್ನು ದಾದರು ಮಾಡಲಿದ್ದು, ಉತ್ತಮ ಆರೈಕೆಯಿಂದ ಮಾತ್ರ ರೋಗಿ ಗುಣಮುಖರಾಗಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಡೀನ್ ಡಾ.ಕೆ.ರವಿ, ನರರೋಗ ತಜ್ಞರಾದ ಡಾ.ವಿ.ಜಿ.ಪ್ರದೀಪ್ ಕುಮಾರ್, ಡಾ.ಅರವಿಂದ ಶರ್ಮಾ, ವೈದ್ಯಕೀಯ ಶಿಕ್ಷಣ ನಿರ್ದೇಶನಲಯದ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಭಾಗಿಯಾಗಿದ್ದರು.