ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
ವಿಜಯನಗರ(ಸೆ.26): ಖಾಸಗಿ ಬಸ್‌ವೊಂದು ಪಲ್ಟಯಾದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನಹಳ್ಳಿ ಬಳಿಯ NH 50ರಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಗಾಯಗೊಂಡ ಖಾಸಗಿ ಬಸ್ ಡ್ರೈವರ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
ತುಮಕೂರು: ಮಧುಗಿರಿ ಬಳಿ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ಅಪಘಾತಕ್ಕೀಡಾದ ಖಾಸಗಿ ಬಸ್ ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿತ್ತು. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.