ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರಿದ್ದರು. ಬಸ್ಸಿನಲ್ಲಿದ್ದ 20 ಕ್ಕೂ ಜನರಿಗೆ ತೀವ್ರತರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ(ಡಿ.15): ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಜಿಲ್ಲೆಯ ಸಾಗರ ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆಯಲ್ಲಿ ಇಂದು(ಭಾನುವಾರ) ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರಿದ್ದರು. ಬಸ್ಸಿನಲ್ಲಿದ್ದ 20 ಕ್ಕೂ ಜನರಿಗೆ ತೀವ್ರತರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾರ್ಗಲ್ ಆಸ್ಪತ್ರೆಗೆ ಹಾಗೂ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ: ಲಾರಿ, ಕಾರು ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ದಂಪತಿ ದುರ್ಮರಣ
ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನ ವಿಚಾರಿಸಿದ್ದಾರೆ. ಬಸ್ಸಿನಲ್ಲಿದ್ದವರೆಲ್ಲರೂ ಬಿಸಿ ರೋಡ್ ಷಂಬೂರ್ ಸಾಯಿ ಮಂದಿರದ ವತಿಯಿಂದ ಟೂರಿಸ್ಟ್ ಪ್ಯಾಕೇಜ್ ನಲ್ಲಿ ಆಗಮಿಸಿದ್ದರು. ಕಾರ್ಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.