ಕಲುಷಿತ ನೀರು ಸೇವಿಸಿದ ಪರಿಣಾಮ ಮಹಿಳೆಯರು, ಮಕ್ಕಳು, ವಯೋವೃದ್ದರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಿಗ್ಗೆಯಿಂದಲೇ ಕಾಣಿಸಿಕೊಂಡ ಹಲವು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಶಿವಮೊಗ್ಗದ ಮೆಗ್ಗಾನ್, ಭದ್ರಾವತಿ , ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ದಾವಣಗೆರೆ(ಆ.29): ಕಲುಷಿತ ನೀರು ಸೇವಿಸಿ 22 ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ.
ಕಲುಷಿತ ನೀರು ಸೇವಿಸಿದ ಪರಿಣಾಮ ಮಹಿಳೆಯರು, ಮಕ್ಕಳು, ವಯೋವೃದ್ದರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಬೆಳಿಗ್ಗೆಯಿಂದಲೇ ಕಾಣಿಸಿಕೊಂಡ ಹಲವು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಶಿವಮೊಗ್ಗದ ಮೆಗ್ಗಾನ್, ಭದ್ರಾವತಿ , ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
undefined
ಯಾದಗಿರಿ: ಕಲುಷಿತ ನೀರು ಸೇವಿಸಿ 14 ಜನ ಅಸ್ವಸ್ಥ
ಜೋಳದಾಳ್ ಗ್ರಾಮದಲ್ಲಿ ನೀರು ಪೂರೈಕೆಯಲ್ಲಿ ಆದ ವ್ಯತ್ಯಾಸದಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ, ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.