ಮಧ್ಯಾಹ್ನದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯಾದಗಿರಿ (ಜೂ.14): ಮಧ್ಯಾಹ್ನದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಒಂದಲ್ಲ ಎರಡಲ್ಲ ದೋರನಹಳ್ಳಿ ಗ್ರಾಮದ ಮೂರು ಸರ್ಕಾರಿ ಶಾಲೆಯ ಮಕ್ಕಳಲ್ಲಿ ಕಾಣಿಸಿಕೊಂಡ ವಾಂತಿ-ಬೇಧಿ. ಅಂಬೇಡ್ಕರ್ ಸರ್ಕಾರಿ ಪ್ರಾಥಮಿಕ ಶಾಲೆ, ಮಹಾಂತೇಶ್ವರ ಕಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇ ಅಗಸಿ ಶಾಲೆಯ ಮಕ್ಕಳು ಸಹ ಬಿಸಿಯೂಟ ಸೇವಿಸಿದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾರೆ.
ಒಂದು ಮಗುವಿಗೆ ಮೊಟ್ಟೆ, ಮತ್ತೊಂದು ಮಗುವಿಗೆ ಖಾಲಿ ತಟ್ಟೆ! ಶಿಕ್ಷಣ ಸಚಿವರೇ ಏನಿದೆಲ್ಲ?
ಗ್ರಾಮದ ಮೂರು ಶಾಲೆಗಳಿಗೆ ಎನ್‌ಜಿಒ ಒಂದರಿಂದ ಪೂರೈಕೆಯಾಗಿದ್ದ ಬಿಸಿಯೂಟ. ಊಟ ಸೇವಿಸಿದ ಸ್ವಲ್ಪ ಹೊತ್ತಿನಲ್ಲೇ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ ಹೊಟ್ಟೆ ನೋವು ಎಂದು ಮಕ್ಕಳು ಒದ್ದಾಡುತ್ತಿರುವಾಗಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಪೋಷಕರು. ಏಕಾಏಕಿ ಹಲವು ಮಕ್ಕಳು ತೀವ್ರ ಅಸ್ವಸ್ಥರಾಗುತ್ತಿದ್ದಂತೆ ಆತಂಕಗೊಂಡ ಮಕ್ಕಳ ಪೋಷಕರು. ಫುಡ್ ಪಾಯ್ಸನ್ ಆಗಿರುವ ಶಂಕೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು. ಸುಮಾರು 50ಕ್ಕೂ ಅಧಿಕ ಮಕ್ಕಳು ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.