ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದಾರೆ..
ಮಡಿಕೇರಿ(ಮೇ 12): ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿರುತ್ತಾರೆ.
ಇತರೆ ಜಿಲ್ಲೆ/ ರಾಜ್ಯಗಳಿಂದ ಪಾಸ್‌ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರೂ ಸೇರಿದಂತೆ 14 ದಿನಗಳೊಳಗಿರುವ ಗೃಹ ಸಂಪರ್ಕ ತಡೆಯಲ್ಲಿರುವ ಪ್ರಕರಣಗಳ ವಿವರಗಳು ಕೆಳಕಂಡಂತಿವೆ. ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಜನರು-5478, ಜಿಲ್ಲೆಯಲ್ಲಿ ಸಂಪರ್ಕ ತಡೆಯಲ್ಲಿರುವ ಇತರೆ ರಾಜ್ಯದ ಜನರು-212, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-5690.
ಇಂದು ಮಂಗಳೂರಿಗೆ ಬರಲಿದ್ದಾರೆ 177 UAE ಪ್ರಯಾಣಿಕರು
ಇಲ್ಲಿಯವರೆಗೆ ಒಟ್ಟು 947 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಪಾಸಿಟಿವ್ ಪ್ರಕರಣಗಳು- 01 (ಪ್ರಸ್ತುತ ಗುಣಮುಖರಾಗಿದ್ದಾರೆ). ನೆಗೆಟಿವ್ ವರದಿ ಬಂದ ಪ್ರಕರಣಗಳು-891. ವರದಿ ನಿರೀಕ್ಷಿತ ಪ್ರಕರಣಗಳು-55. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 40 ಜನರು ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.