'ಹಳ್ಳದಲ್ಲಿ ಕೊಚ್ಚಿಹೋಗಿದ್ದ ಪೇದೆಗಳ ಕುಟುಂಬಕ್ಕೆ ತಲಾ 50 ಲಕ್ಷ ರೂಪಾಯಿ ವರೆಗೂ ಪರಿಹಾರ'

By Suvarna News  |  First Published Sep 11, 2022, 7:28 PM IST

ಕರ್ತವ್ಯ ಮುಗಿಸಿ ವಾಪಾಸ್ ಬರುವಾಗ ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿದ್ದ ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್‌ಸ್ಟೇಬಲ್ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ.


ಗದಗ, (ಸೆಪ್ಟೆಂಬರ್. 11): ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿದ್ದ ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್‌ಸ್ಟೇಬಲ್ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ಪಾಟೀಲ್ ಭರವಸೆ ಕೊಟ್ಟಿದ್ದಾರೆ. 

ಅತಿವೃಷ್ಟಿ ಪರಿಸ್ಥಿತಿ ವಿಷಯವಾಗಿ ಗದಗ ನಗರದ ಪರಿವೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹೇಶ್ ಹಾಗೂ ನಿಂಗಪ್ಪ ಎಂಬ ಪೊಲೀಸ್ ಕಾನ್ಸ್‌ಸ್ಟೇಬಲ್ ಕುಟುಂಬಗಳಿಗೆ ತಲಾ 50 ಲಕ್ಷದ ವರೆಗೆ ಪರಿಹಾರ ಸಿಗಲಿದೆ ಸಚಿವ ಬಿಸಿ ಪಾಟೀಲ್ ಹೇಳಿದರು.

ಪೊಲೀಸರ ಕುಟುಂಬಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಎಸ್ ಡಿಆರ್ ಎಫ್ ಅಡಿ ಜಿಲ್ಲಾಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರವನ್ನ ನೀಡಲಿದ್ದಾರೆ. ಪೊಲೀಸ್ ಇಲಾಖೆ ವತಿಯಿಂದ 50 ಲಕ್ಷ ರೂಪಾಯಿ ವರೆಗೂ ಪರಿಹಾರ ಬರುತ್ತದೆ. ಹೆಚ್ಚಿನ ಪರಿಹರಾರ ದೊರಕಿಸಲು ಸಾಧ್ಯವಾ ಅನ್ನೋ ಬಗ್ಗೆಯೂ ಚರ್ಚೆ ನಡೆಸ್ತೇನೆ ಎಂದು ಹೇಳಿದರು.

Latest Videos

undefined

ಮಳೆ ನೀರಲ್ಲಿ ಕೊಚ್ಚಿಹೋದ ಇಬ್ರು ಪೊಲೀಸ್ರು, ಓರ್ವ ಪೇದೆಯ ಶವ ಪತ್ತೆ

ಈ ಬಗ್ಗೆ ಮಾಹಿತಿ ನೀಡಿದ ಎಸ್ ಪಿ ಶಿವಪ್ರಕಾಶ್ ದೇವರಾಜು, ಗ್ರೂಪ್ ಇನ್ಸುರೆನ್ಸ್ ಸೇರಿದಂತೆ ಪೊಲೀಸ್ ಇಲಾಖೆ ವತಿಯಿಂದ 50 ಲಕ್ಷ ರೂಪಾಯಿಗೂ ಹೆಚ್ಚು ಹಣ ಬರಲಿದೆ. ಕುಟುಂಬದೊಂದಿಗೆ ಇಲಾಖೆ ಇದೆ.ಕುಟುಂಬಗಳಿಗೆ ಸಹಾಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. 

ಸೆಪ್ಟೆಂಬರ್ 5ರಂದು ಮುಂಡರಗಿ ಪೊಲೀಸ್ ಠಾಣೆಯ ದೇಪೆಗಳಾದ ಮಹೇಶ್, ನಿಂಗಪ್ಪ ಎನ್ನುವರು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ವ್ಯಾಪ್ತಿಯ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ರು.
ಬಳಿಕ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆ ನಡೆಸಿ ಸೆಪ್ಟೆಂಬರ್ 6 ರಂದು ಇಬ್ಬರು ಕಾನ್ಸ್‌ಟೇಬಲ್‌ಗಳ ಮೃತ ಪತ್ತೆ ಮಾಡಿದ್ದರು 

click me!