ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ, ಮೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಂತರ ರು. ಮೌಲ್ಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗ (ಏ.2) : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ, ಮೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಂತರ ರು. ಮೌಲ್ಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗ(Shivamogga) ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 6 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ವಿವಿಧ ವಸ್ತುಗಳನ್ನು ಸೀಜ್ ಮಾಡಿದ್ದಾರೆ !
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಗರ್‌ಹುಕುಂ ರೈತರ ರಕ್ಷಣೆ: ಮಧು ಬಂಗಾರಪ್ಪ
ನಾಲ್ಕುವರೆ ಕೋಟಿ ಮೌಲ್ಯದ ಸೀರೆ ವಶ
ಶುಕ್ರವಾರ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು .4.50 ಲಕ್ಷ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೆಆರ್‌ಪುರಂ ರಸ್ತೆಯಲ್ಲಿರುವ ಗೋಡೌನ್‌ನಲ್ಲಿ ಇಷ್ಟೊಂದು ಪ್ರಮಾಣದ ಸೀರೆಗಳನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದ್ದು, ಪೊಲೀಸರು ತಮಗೆ ಬಂದ ಮಾಹಿತಿ ಅನ್ವಯ ರೇಡ್ ನಡೆಸಿ ನಾಲ್ಕೂವರೆ ಕೋಟಿ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಇಷ್ಟುದೊಡ್ಡಮಟ್ಟದ ಸಂಗ್ರಹವನ್ನು ದಾಖಲೆ ಇಲ್ಲದೇ ಇಟ್ಟಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಅರಕೆರೆ ಚೆಕ್‌ಪೋಸ್ಟ್‌ನಲ್ಲಿ .1.40 ಕೋಟಿ ಸೀಜ್:
ಮಾ.31ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಚೆಕ್‌ಪೋಸ್ಟ್‌ನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ .1.40 ಕೋಟಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಎಟಿಎಂಗೆ ಹಣ ಸಾಗಿಸುವ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಹಣದ ಬಗ್ಗೆ ಅನುಮಾನಗೊಂಡ ಪೊಲೀಸರು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ದಾಖಲೆ ಸಮರ್ಪಕವಾಗಿಲ್ಲದ ಕಾರಣ ವಾಹನವನ್ನು ಹಾಗೂ ಹಣವನ್ನು ಸೀಜ್ ಮಾಡಲಾಗಿದೆ.
26 ಕ್ವಿಂಟಲ್ ಅಕ್ಕಿ ಜಪ್ತಿ:
ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್‌ಗಳಲ್ಲಿದ್ದ, ಅಂದಾಜು .1.56 ಲಕ್ಷ ಮೌಲ್ಯದ 26 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
3.21 ಲಕ್ಷ ಮೌಲ್ಯದ ಲಿಕ್ಕರ್ ವಶ:
ದೇವಬಾಳ- ಯಡವಾಲದ ಕೆರೆ ಏರಿ ರಸ್ತೆಯಲ್ಲಿ ವ್ಯಾಗನಾರ್ ಕಾರ್‌ನಲ್ಲಿ ವಿವಿಧ ಬ್ರಾಂಡ್ ನ 20.790 ಲೀಟರ್ ಮದ್ಯ ಮತ್ತು 56.270 ಲೀಟರ್ ಬಿಯರ್ ಹೊತ್ತೊಯ್ಯುತ್ತಿದ್ದ ವೇಳೆ ಅಬಕಾರಿ ಇಲಾಖೆಯವರು ದಾಳಿ ನಡೆಸಿದ್ದಾರೆ. ಈ ವೇಳೆ ಅಂದಾಜು .3.21 ಲಕ್ಷ ಮೌಲ್ಯದ ಲಿಕ್ಕರ್ ಅನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಚೆಕ್‌ಪೋಸ್ಟ್‌ಗಳಿಗೆ ಎಸ್‌ಪಿ ದಿಢೀರ್ ಭೇಟಿ
ಚುನಾವಣಾ ನೀತಿ ಸಂಹಿತೆ ಜಾರಿ ಆದಾಗಿನಿಂದ ಶಿವಮೊಗ್ಗ ಜಿಲ್ಲಾದ್ಯಂತ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಈ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ದಿಢೀರ್ ಭೇಟಿಕೊಡುತ್ತಿದ್ದಾರೆ.
ಈ ವೇಳೆ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡುತ್ತಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎಸ್‌ಪಿ ಅವರ ಜೊತೆಯಲ್ಲಿ ಪೊಲೀಸ್ ಉಪ ಅಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರು ಸಹಾ ತಮ್ಮ ವ್ಯಾಪ್ತಿಯ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ, ವಾಹನಗಳ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಾಗರದಲ್ಲಿ .20 ಲಕ್ಷ ಜಪ್ತಿ
ಇನ್ನೊಂದೆಡೆ, ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ .20 ಲಕ್ಷ ರು. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ಚೂರಿಕಟ್ಟೆಯ ಚೆಕ್‌ಪೋಸ್ಟ್‌ನಲ್ಲಿ ಟಾಟಾ ಇಂಡಿಗೋ ವಾಹನದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಹಣವನ್ನು ಸಾಗಿಸಲಾಗುತ್ತಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಹಣವನ್ನು ಸೀಜ್ ಮಾಡಲಾಗಿದೆ.
ಬ್ರಾಹ್ಮಣರ ಮೇಲೆ ಹರತಾಳು ಹಾಲಪ್ಪನ ದಬ್ಬಾಳಿಕೆ ಇನ್ಮುಂದೆ ಸಹಿಸಲ್ಲ: ಬ್ರಾಹ್ಮಣ ಮಹಾಸಭಾ
-1ಎಸ್‌ಎಂಜಿಕೆಪಿ03: ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್‌ಗಳಲ್ಲಿದ್ದ ಅಂದಾಜು .1.56 ಲಕ್ಷ ಮೌಲ್ಯದ 26 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.