ಮಂಗಳೂರು (ಆ.24): ಶಿರಾಡಿ ಘಾಟ್‌ನಲ್ಲಿ ಎಲ್ಲ ರೀತಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ದೋಣಿಗಲ್‌ನಲ್ಲಿ ಹೆದ್ದಾರಿ ಕುಸಿತಗೊಂಡ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.
undefined
ಶಿರಾಡಿ, ಚಾರ್ಮಾಡಿ ಘಾಟ್ ದುರಸ್ತಿಗೆ ಕೇಂದ್ರಕ್ಕೆ ಸಂಸದ ನಳಿನ್ ಮನವಿ
ಇದೀಗ ಹೆದ್ದಾರಿ ದುರಸ್ತಿಯಾದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ವಾಹನಗಳಿಗೆ ಸಂಚಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6ರ ತನಕ ಅವಕಾಶ ಕಲ್ಪಿಸಲಾಗಿದೆ.
ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಪರಿಶೀಲಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರು ಶನಿವಾರ ಜಂಟಿ ಸಮೀಕ್ಷೆ ನಡೆಸಿದ್ದರು.