ಮೃತ ಮಹಿಳೆ ಸಂಬಂಧಿಕರಿಂದ ಆಕ್ರೋಶ ಪ್ರತಿಭಟನೆ| ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಘಟನೆ| ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ| ಪೊಲೀಸರು ಪರಿಸ್ಥಿತಿಯನ್ನ ಹತೋಟಿಗೆ ತರುವ ಪ್ರಯತ್ನ|
ದಾವಣಗೆರೆ(ಮಾ.15): ಹೆರಿಗೆಗೆ ಬಂದ ತಾಯಿ-ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ಇಂದು(ಸೋಮವಾರ) ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಾವ್ಯ (21) ಮೃತಪಟ್ಟ ಮಹಿಳೆಯಾಗಿದ್ದಾಳೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ ಗ್ರಾಮದ ನಿವಾಸಿ ಕಾವ್ಯ ನಿನ್ನೆ(ಭಾನುವಾರ) ತಡರಾತ್ರಿ ಹೆರಿಗೆಗೆಂದು ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಬಂದಿದ್ದಳು. ಆದರೆ, ಸೂಕ್ತ ಚಿಕಿತ್ಸೆ ನೀಡಬೇಕಿದ್ದ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರಿಂದ ಕಾವ್ಯ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಆರ್ಯ ಈಡಿಗ ಮಹಿಳೆಯರು ಕನಿಷ್ಠ 5 ಮಕ್ಕಳನ್ನಾದರೂ ಹೆರಬೇಕು: ಸ್ವಾಮೀಜಿ
ಪ್ರತಿಭಟನೆ ನಡೆಸುತ್ತಿರುವುದರಿಂದ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಹೀಗಾಗಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನ ಹತೋಟಿಗೆ ತರುವ ಪ್ರಯತ್ನವನ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.