ಚಿತ್ರದುರ್ಗ: ಬೇಲಿಗೆ ಬೆಂಕಿ ಬಿದ್ದು ತಾಯಿ, ಇಬ್ಬರು ಮಕ್ಕಳು ಸಜೀವ ದಹನ

By Kannadaprabha News  |  First Published Mar 20, 2024, 7:35 AM IST

ಮನೆಯ ಪಕ್ಕದ ಕಣದ ಬೇಲಿಗೆ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಮಾರಕ್ಕನೇ ಕಣದ ಬೇಲಿಗೆ ಬೆಂಕಿ ಹಚ್ಚಿ ತನ್ನಿಬ್ಬರೂ ಮಕ್ಕಳನ್ನು ಬೆಂಕಿಗೆ ತಳ್ಳಿ ತಾನೂ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 


ಚಳ್ಳಕೆರೆ(ಮಾ.20):  ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಬೇಲಿಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು, ತಾಯಿ ಸಜೀವ ದಹನವಾದ ಘಟನೆ ನಡೆದಿದೆ. ಇದು ಆತ್ಮಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಗ್ರಾಮದ ಲಾರಿಚಾಲಕ ತಿಪ್ಪೇಸ್ವಾಮಿ ಅವರ ಪತ್ನಿ ತಲಾರಿಮಾರಕ್ಕ (24), ಆಕೆಯ ಮಕ್ಕಳಾದ ಟಿ.ನಯನ್(4), ಹರ್ಷವರ್ಧನ್(2) ಸಾವಿಗೀಡಾದವರು. 

Tap to resize

Latest Videos

undefined

ಮಗಳು ಆತ್ಮಹತ್ಯೆ: ಗಂಡನ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಗಳು: ಅತ್ತೆಮಾವ ಇಬ್ಬರೂ ಸಜೀವ ದಹನ

ಮನೆಯ ಪಕ್ಕದ ಕಣದ ಬೇಲಿಗೆ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಮಾರಕ್ಕನೇ ಕಣದ ಬೇಲಿಗೆ ಬೆಂಕಿ ಹಚ್ಚಿ ತನ್ನಿಬ್ಬರೂ ಮಕ್ಕಳನ್ನು ಬೆಂಕಿಗೆ ತಳ್ಳಿ ತಾನೂ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಳಕು ಪಿಎಸ್‌ಐ ಅಶ್ವಿನಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

click me!