ಮಂಡ್ಯ; ಬಟ್ಟೆ ತೊಳೆಯಲು ತೆರಳಿದ್ದ ತಾಯಿ, ಇಬ್ಬರು ಮಕ್ಕಳು ನೀರು ಪಾಲು

Published : Jun 14, 2020, 04:23 PM ISTUpdated : Jun 14, 2020, 04:29 PM IST
ಮಂಡ್ಯ; ಬಟ್ಟೆ ತೊಳೆಯಲು ತೆರಳಿದ್ದ ತಾಯಿ, ಇಬ್ಬರು ಮಕ್ಕಳು ನೀರು ಪಾಲು

ಸಾರಾಂಶ

ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಕೆರೆ ಬಿದ್ದು ಸಾವನ್ನಿಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಂಡ್ಯ, (ಜೂನ್. 14): ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೀರನಹಳ್ಳಿ ಗ್ರಾಮದ ಗೀತಾ ನರಸಿಂಹಯ್ಯ (38) ಮತ್ತು ಮಕ್ಕಳಾದ ಸವಿತಾ (19), ಸೌಮ್ಯ (14) ಎಂದು ಗುರುತಿಸಲಾಗಿದೆ.

ಇಂದು (ಭಾನುವಾರ) ಗ್ರಾಮದ ಹತ್ತಿರವಿರುವ ಕೆರೆಗೆ ಮಕ್ಕಳೊಂದಿಗೆ ಗೀತಾ ಅವರು ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಒಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಅವರನ್ನು ಎಳೆದುಕೊಳ್ಳಲು ಹೋಗಿ ಇಬ್ಬರು ನೀರು ಪಾಲಾಗಿದ್ದಾರೆ. 

ಗ್ರಾಮಸ್ಥರು ಕೆರೆಯಲ್ಲಿ ಬಿಂದಿಗೆ ತೇಲುತ್ತಿದ್ದುದನ್ನು ಗಮನಿಸಿ ಹತ್ತಿರ ಹೋಗಿ ನೋಡಿದಾಗ, ದಡದಲ್ಲಿ ಬಟ್ಟೆಗಳು ಬಿದ್ದಿರುವುದು ಕಂಡುಬಂದಿದೆ.

ಬಳಿಕ ಗ್ರಾಮಸ್ಥರು ಮುಳುಗು ತಜ್ಞರನ್ನು ಕರೆಸಿ ಶವಗಳನ್ನ ಕೆರೆಯಿಂದ ಹೊರಕ್ಕೆ ತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

"

PREV
click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?