ಹಾವೇರಿ: 108 ಅಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

Suvarna News   | Asianet News
Published : Aug 05, 2021, 01:18 PM IST
ಹಾವೇರಿ: 108  ಅಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಸಾರಾಂಶ

* ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದ ಘಟನೆ *  ಮಗುವಿಗೆ ಜನ್ಮ ನೀಡಿದ ತಾಯಿ ಮಮತಾ ಹರಿಜನ  *  ಸಮಯ ಪ್ರಜ್ಞೆ ಮೆರೆದು ಸುರಕ್ಷಿತ ಹೆರಿಗೆ ಮಾಡಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ 

ಹಾವೇರಿ(ಆ.05):  ತಾಲೂಕಿನ ಮರೋಳ ಗ್ರಾಮದ ಮಹಿಳೆಯೊಬ್ಬರು 108  ಅಂಬ್ಯುಲೆನ್ಸ್ ವಾಹನದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು(ಗುರುವಾರ) ನಡೆದಿದೆ.

ಮಮತಾ ಹರಿಜನ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣಕ್ಕೆ 108 ಅಂಬ್ಯುಲೆನಸ್‌ಗೆ ಕರೆ ಮಾಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿದ 108 ಅಂಬುಲೆನ್ಸ್ ಸಿಬ್ಬಂದಿಗಳಾದ  EMT ನಾಮದೇವ, ಪೈಲೆಟ್ ಬಸುರಾಜ್ ಗೊರವರ್ ಗುತ್ತಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯತ್ತಿದ್ದರು. 

ಆ್ಯಂಬುಲೆನ್ಸ್‌ನಲ್ಲೇ ಮುದ್ದಾದ ಮಗು​ವಿಗೆ ಜನ್ಮ ನೀಡಿದ ತಾಯಿ

ಈ ವೇಳೆ ಮಾರ್ಗ ಮಧ್ಯೆಯೇ ತಾಯಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಸುರಕ್ಷಿತ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ-ಮಗು ಆರೋಗ್ಯವಾಗಿದ್ದಾರೆ. ಸದ್ಯ ಇಬ್ಬರನ್ನೂ ಗುತ್ತಲ ಆರೋಗ್ಯ ಸಮುದಾಯ ಕೇಂದ್ರಕ್ಕೆ ದಾಖಲಿಸಲಾಗಿದೆ.
 

PREV
click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?