ಹಾವೇರಿ: ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

Published : Jan 12, 2024, 06:16 AM IST
ಹಾವೇರಿ: ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಸಾರಾಂಶ

ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಲಕ್ಷ್ಮೀ ಬಾರ್ಕಿಗೆ ಗುರುವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಕುಟುಂಬದವರು 108 ವಾಹನಕ್ಕೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸ್ಥಳಕ್ಕೆ ತೆರಳಿ ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ ನೋವು ಜಾಸ್ತಿಯಾಗಿದೆ. ತಕ್ಷಣ 108 ಸಿಬ್ಬಂದಿಯೇ ಹೆರಿಗೆ ಮಾಡಿಸಿದ್ದಾರೆ. 

ಹಾವೇರಿ(ಜ.12):  ಹೆರಿಗೆ ನೋವು ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ 108 ಆ್ಯಂಬುಲೆನ್ಸ್‌ನಲ್ಲೇ ತಾಯಿಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. 

ತಾಲೂಕಿನ ವರದಾಹಳ್ಳಿ ಗ್ರಾಮದ ಲಕ್ಷ್ಮೀ ಬಾರ್ಕಿಗೆ ಗುರುವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಕುಟುಂಬದವರು 108 ವಾಹನಕ್ಕೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸ್ಥಳಕ್ಕೆ ತೆರಳಿ ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ ನೋವು ಜಾಸ್ತಿಯಾಗಿದೆ. ತಕ್ಷಣ 108 ಸಿಬ್ಬಂದಿಯೇ ಹೆರಿಗೆ ಮಾಡಿಸಿದ್ದಾರೆ. 

ಹಾಸ್ಟೆಲ್‌ನಲ್ಲಿ ಓದುತ್ತಲೇ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಬಳಿಕ ಜಿಲ್ಲಾಸ್ಪತ್ರೆಗೆ ಕರೆತಂದು ವಾರ್ಡಿಗೆ ಸೇರಿಸಿದ್ದಾರೆ. ತಾಯಿ ಹಾಗೂ ಅವಳಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

PREV
Read more Articles on
click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ