ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಂಗನವಾಡಿ ಕಾರ್ಯಕರ್ತೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಸದ್ಯ ಮಗುವನ್ನ ರಕ್ಷಣೆ ಮಾಡಿ, ಚುಚ್ಚುಮದ್ದು ನೀಡಿ ಶಿಶು ಅಭಿವೃದ್ಧಿ ಅಧಿಕಾರಿಗಳು ಆರೈಕೆ ಮಾಡುತ್ತಿದ್ದಾರೆ.
ವಿಜಯನಗರ(ಡಿ.11): ಜಮೀನೊಂದರಲ್ಲಿ ಹೆತ್ತಮ್ಮ ಮೂರು ದಿನದ ಹಸುಗೂಸು ಬಿಟ್ಟು ಹೋದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ವಡ್ಡರಹಟ್ಟಿ ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ.
ಎರಡು ದಿನಗಳ ಹಿಂದೆಯೇ ಮಗುವನ್ನ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕೂಡ್ಲಿಗಿ ತಾಲೂಕಿನ ಆಲೂರು ವಡ್ಡರಹಟ್ಟಿಯ ಜಮೀನೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ನವಜಾತ ಶಿಶು ಅಳುವುದನ್ನು ಕೂಲಿ ಕಾರ್ಮಿಕರು ಗಮನಿಸಿದ ಕೂಡಲೇ ಮಗುವನ್ನ ರಕ್ಷಿಸಿ ಗ್ರಾಮಸ್ಥರಿಗೆ ಮಾಹಿತಿ ತಲುಪಿಸಿದ್ದರು.
ರಾಮನಗರ: ಶೌಚಾಲಯ ಗುಂಡಿಗೆ ನವಜಾತ ಶಿಶು ಶವ ಪತ್ತೆ
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಂಗನವಾಡಿ ಕಾರ್ಯಕರ್ತೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಸದ್ಯ ಮಗುವನ್ನ ರಕ್ಷಣೆ ಮಾಡಿ, ಚುಚ್ಚುಮದ್ದು ನೀಡಿ ಶಿಶು ಅಭಿವೃದ್ಧಿ ಅಧಿಕಾರಿಗಳು ಆರೈಕೆ ಮಾಡುತ್ತಿದ್ದಾರೆ.
ಅನೈತಿಕ ಸಂಬಂಧಕ್ಕೆ ಮಗು ಜನಿಸಿರುವ ಶಂಕೆ ವ್ಯಕ್ತವಾಗಿದೆ. ಇದೇ ಕಾರಣದಿಂದ ಹೆರಿಗೆಯ ಬಳಿಕ ಮಗುವನ್ನ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಖಾನಾ ಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯಲ್ಲಿಯೇ 6 ತಿಂಗಳಲ್ಲಿ 29 ಬಾಣಂತಿಯರು, 1 ವರ್ಷದಲ್ಲಿ 322 ನವಜಾತ ಶಿಶುಗಳ ಸಾವು
ಬೆಳಗಾವಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಹಿಂದೆಯೇ ಬೆಳಗಾವಿ ಬಿಮ್ಸ್ ಸೇರಿಂತೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಬಾಣಂತಿಯರು ಹಾಗೂ ನವಜಾತ ಶಿಶುಗಳ ಮರಣ ಮೃದಂಗಕ್ಕೆ ಆರೋಗ್ಯ ಇಲಾಖೆ ಹಲವಾರು ಕಾರಣಗಳನ್ನು ಕೂಡ ಕೊಟ್ಟಿದೆ. ಆದರೆ, ಇದು ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
2024ರ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಜಿಲ್ಲೆಯಲ್ಲಿ 29 ಬಾಣಂತಿಯರ ಸಾವಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 2024ರ ಜನವರಿಯಿಂದ 322 ಶಿಶುಗಳು ಮೃತಪಟ್ಟಿವೆ. ಈ ಪೈಕಿ ಬಿಮ್ಸ್ ಆಸ್ಪತ್ರೆಯಲ್ಲಿ 172 ಶಿಶುಗಳು ಮೃತಪಟ್ಟಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪ್ರತಿ ತಿಂಗಳು 45 ರಿಂದ 52 ಸರಾಸರಿಯಲ್ಲಿ ನವಜಾತ ಶಿಶುಗಳು ಮರಣ ಹೊಂದಿವೆ. ತೂಕ ಕಡಿಮೆ, ಸರಿಯಾಗಿ ಬೆಳವಣಿಗೆ ಆಗದೆ ಇರುವುದು, ಸೂಕ್ತ ಸಮಯದಲ್ಲಿ ಆಮ್ಲಜನಕ ಚಿಕಿತ್ಸೆ ಸಿಗದಿರುವುದು, ನ್ಯುಮೋನಿಯಾ, ಉಸಿರುಗಟ್ಟುವಿಕೆ ಮತ್ತು ಅಪೌಷ್ಟಿಕತೆಯಿಂದ ಶಿಶುಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಂಶವಾಹಿ ಸಮಸ್ಯೆ ಇದ್ದ ಮಗು ಜನನ : ಸಮಸ್ಯೆ ಗುರುತಿಸುವಲ್ಲಿ ವಿಫಲರಾದ ವೈದ್ಯರ ವಿರುದ್ಧ ಕೇಸು!
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ಶಿಶುಗಳು ಮೃತಪಟ್ಟಿವೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶರಣಪ್ಪ ಗಡೇದ ತಿಳಿಸಿದ್ದಾರೆ.
ಬಳ್ಳಾರಿಯ ಬಿಮ್ಸ್‌ನಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಇತ್ತೀಚಿಗೆ ಬೆಳಗಾವಿ ಜಿಲ್ಲಾಸ್ಪತ್ರೆ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ 8 ಅಧಿಕಾರಿಗಳಿಂದ ಉಗ್ರಾಣದಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್ಗಳು ಪತ್ತೆಯಾಗಿದ್ದವು.