ಸಂತ ಸೇವಾಲಾಲ್‌ ಕ್ಷೇತ್ರ ಅಭಿವೃದ್ಧಿಗೆ ಸಂಸದ ಮನವಿ

By Kannadaprabha News  |  First Published Oct 23, 2022, 8:16 AM IST
  •  ಸಂತ ಸೇವಾಲಾಲ್‌ ಕ್ಷೇತ್ರ ಅಭಿವೃದ್ಧಿಗೆ ಸಂಸದ ಮನವಿ
  •  ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರಿಗೆ ಭೇಟಿಯಾದ ಬಿ.ವೈ.ರಾಘವೇಂದ್ರ

ಶಿವಮೊಗ್ಗ(ಅ.23): ಲೋಕಸಭಾ ಸಭಾ ಸಂಸದ ಬಿ. ವೈ.ರಾಘವೇಂದ್ರ ಅವರು ಬಂಜಾರ ಸಮುದಾಯದ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಭೇಟಿ ಮಾಡಿ ಬಂಜಾರ ಸಮುದಾಯದ ಪವಿತ್ರ ಕ್ಷೇತ್ರವಾದ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನ ಕೊಪ್ಪದಲ್ಲಿರುವ ಸಂತ ಸೇವಾಲಾಲ್‌ ಕ್ಷೇತ್ರದ ವಿವಿಧ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಹಾಗೂ ಈ ಕ್ಷೇತ್ರದಲ್ಲಿ ಮುಂಬರುವ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಮಾಡಿಕೊಡುವಂತೆ ವಿನಂತಿಸಿದರು.

ಶಿವಮೊಗ್ಗ: ಫುಟ್‌ಪಾತ್‌ ಕೆಳಗೆ ವಿಚಿತ್ರ ಶಬ್ದ, ಹೊಗೆ! ಏನಿರಬಹುದು?

Tap to resize

Latest Videos

ಈ ಸಂದರ್ಭದಲ್ಲಿ ಶಿಕಾರಿಪುರ ಕ್ಷೇತ್ರದ ತಾಂಡ ಅಭಿವೃದ್ಧಿ ನಿಗಮದ ನಿರ್ದೇಶಕಾರದ ರಮೇಶ್‌ ನಾಯ್‌್ಕ, ಮನು ಪರ್ವಾ, ತಾಂಡ ಅಭಿವೃದ್ಧಿ ನಿಗಮದ ನಿರ್ದೇಶಕ ಹಾಗೂ ಸೇವಾಲಾಲ್‌ ಪ್ರತಿಷ್ಠಾನದ ನಿರ್ದೇಶಕರುಗಳಾದ ನಾನ್ಯಾನಾಯ್ಕ…, ಗಜೇಂದ್ರನಾಯ್ಕ…, ತುಳಸಿನಾಯ್ಕ…, ಹನುಮಂತನಾಯ್ಕ…, ಭೂಪಾಲ್‌ ನಾಯ್ಕ…, ಈಶ್ವರ ನಾಯ್ಕ… ಜೊತೆಗಿದ್ದರು.

2ರಂದು ಲೋಕ್‌ ಅದಾಲತ್‌: ನ್ಯಾ.ಮಲ್ಲಿಕಾರ್ಜುನ ಗೌಡ

ನವೆಂಬರ್‌ 12ರಂದು ನಗರದಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ನಡೆಯಲಿದ್ದು, ಇಲ್ಲಿ ಇತ್ಯರ್ಥಪಡಿಸಬಹುದಾದ ಈವರೆಗೆ 5785 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ಲೋಕ್‌ ಅದಾಲತ್‌ನಲ್ಲಿ ಒಟ್ಟು 26,637 ಪ್ರಕರಣ ಇತ್ಯರ್ಥಪಡಿಸಲಾಗಿತ್ತು. ಈ ಬಾರಿ ಈವರೆಗೆ 5,785 ಪ್ರಕರಣ ಗುರುತಿಸಲಾಗಿದೆ. ನ.10ರವರೆಗೆ ರಾಜಿ ಸಂಧಾನಕ್ಕೆ ಪ್ರಕರಣ ಗುರುತಿಸಲಾಗುವುದು. ಇಲ್ಲಿ ಇತ್ಯರ್ಥವಾಗುವ ಪ್ರಕರಣಗಳು ಅಂತಿಮವಾಗಿದ್ದು, ಮೇಲ್ಮನವಿಗೆ ಅವಕಾಶವಿಲ್ಲ. ಉಭಯ ಕಕ್ಷಿದಾರರ ನಡುವಿನ ಸಂಬಂಧ ಸೌಹಾರ್ದಯುತವಾಗಿದ್ದು, ಕೋರ್ಚ್‌ ಕಲಾಪ ಮತ್ತು ಕಕ್ಷಿದಾರರ ಸಮಯ ಉಳಿತಾಯದೊಂದಿಗೆ ಸಂಪೂರ್ಣ ಶುಲ್ಕ ವಾಪಸ್‌ ನೀಡುವುದರಿಂದ ಹಣ ಕೂಡ ಉಳಿತಾಯ ಆಗುತ್ತದೆ. ಆದ್ದರಿಂದ ಜನರು ಲೋಕ್‌ ಅದಾಲತ್‌ ಉಪಯೋಗ ಪಡೆಯಬೇಕೆಂದು ಕರೆ ನೀಡಿದರು.

ಈ ಲೋಕ್‌ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ…, ವೈವಾಹಿಕ (ವಿಚ್ಚೇದನ ಹೊರತುಪಡಿಸಿ), ಮೋಟಾರು ಪರಿಹಾರ ಪ್ರಕರಣಗಳು, ಚೆಕ್‌ ಬೌನ್ಸ್‌ ರಾಜಿ ಆಗಬಹುದಾದ ಕ್ರಿಮಿನಲ್‌ ಪ್ರಕರಣಗಳು ಇತ್ಯರ್ಥವಾಗಲಿವೆ. ಜೊತೆಗೆ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲವು 2020ರಲ್ಲಿ ಪ್ರಕರಣವೊಂದರ ಅನ್ವಯ ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ಕುರಿತು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರ ಸಮ್ಮುಖ ರಾಜೀ ಸಂಧಾನದ ಮಾಡಿ ಪ್ರಕರಣ ಇತ್ಯರ್ಥ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಪೊಲೀಸರ ರಕ್ಷಣೆಯೂ ನಾಗರಿಕ ಕರ್ತವ್ಯ: ನ್ಯಾ.ಮಲ್ಲಿಕಾರ್ಜುನಗೌಡ

ಅಲ್ಲದೇ, ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುತ್‌, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್‌ ಪಾಸು ಮಾಡಲಾಗುವುದು ಎಂದು ತಿಳಿಸಿದರು.

click me!