ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು.
ಬೈಂದೂರು (ಆ.03): ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು. ಸುಮಾರು 1200 ವರ್ಷಗಳ ಇತಿಹಾಸವಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಇಲ್ಲಿ ಭೇಟಿ ನೀಡುತ್ತಾರೆ.
ಆದ್ದರಿಂದ ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ - ರೈಲ್ವೆ - ಬಸ್ - ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾನಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನೊಳಗೊಂಡ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಂಸದ ಉಮೇಶ್ ಜಾಧವ್
ಈ ಸಂದರ್ಭ ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ, ಬೈಂದೂರಿನ ವೆಂಕಟೇಶ್ ಕಿಣಿ ಉಪಸ್ಥಿತರಿದ್ದರು. ಮನವಿಗೆ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ ನಿರ್ಮಲಾ ಸೀತರಾಮನ್, ಬೇಡಿಕೆಗಳ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಬಿ.ವೈ, ರಾಘವೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಸೌಲಭ್ಯ ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯ ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ,ನೈತಿಕ ಮೌಲ್ಯ ಬೆಳೆಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿ ಮಾತನಾಡಿ, ಮಕ್ಕಳ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರಕಾರ ಸಾಕಷ್ಟು ಯೋಜನೆ ನೀಡಿದೆ. ಅವುಗಳ ಮೂಲಕ ಮಕ್ಕಳಿಗೆ ಉತ್ತಮ ಮೌಲ್ಯಯುತ ಶಿಕ್ಷಣ ಸಿಗುವಂತೆ ಮಾಡಬೇಕು.
ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಿಲ್ಲಿಸದಿದ್ದರೆ ಉಗ್ರ ಹೋರಾಟ: ಮಾಜಿ ಸಚಿವ ಆರ್.ಶಂಕರ್
ಅಲ್ಲದೆ ಉತ್ತಮ ಪೌಷ್ಠಿಕ ಆಹಾರ ನೀಡಿದರೆ ಅವರು ಉತ್ತಮ ಆರೋಗ್ಯ ಪಡೆಯುವ ಜತೆ ದೇಶಕ್ಕೂ ಉತ್ತಮ ಪ್ರಜೆಯಾಗಿ ರೂಪಗೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಗಮನ ನೀಡಬೇಕು ಎಂದರು. ರಾಜ್ಯಾದ್ಯಂತ ಹೊಸದಾಗಿ ಅಂಗನವಾಡಿ ಸಹಾಯಕಿಯರ, ಶಿಕ್ಷಕಿಯರ ನೇಮಕವಾಗಿಲ್ಲ. ಆದ್ದರಿಂದ ಮಕ್ಕಳಿಗೂ ತೀವ್ರ ತೊಂದರೆ ಆಗುವ ಜತೆ ಒಬ್ಬರೇ ಮಕ್ಕಳಿಗೆ ಪಾಠ, ಅಡುಗೆ, ಸ್ವಚ್ಛತೆ, ಚುನಾವಣೆ ಕಾರ್ಯ, ವಿವಿಧ ರೀತಿ ಸಮೀಕ್ಷೆ ಹೀಗೆ ಹಲವು ಕಾರ್ಯ ಮಾಡುವ ಒತ್ತಡದಲ್ಲಿ ಅಂಗನವಾಡಿ ಶಿಕ್ಷಕಿಯರು ಇದ್ದಾರೆ. ಅದಕ್ಕಾಗಿ ಕೂಡಲೆ ನೇಮಕಾತಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.