ಪ್ರೀತಿ ಹಾಗೂ ಶಿವಭಕ್ತಿಗೆ ಗಡಿ ಇರುವುದಿಲ್ಲ. ಇಂಥ ಒಂದು ಬಾಂಧವ್ಯ, ಅನ್ಯೋನ್ಯತೆಯ ಪ್ರದೇಶ ಇದು. ಇವು ಗಡಿ ಮೀರಿ ವ್ಯಾಪಿಸಿಕೊಂಡಿವೆ. ಈ ಎರಡೂ ರಾಜ್ಯಗಳು ರಾಷ್ಟ್ರದ ಪ್ರತೀಕ. ಮಾತೃಭಾಷೆಯ ಅಭಿಮಾನ ಇರಬೇಕು. ಅದು ಅತಿರೇಕಕ್ಕೆ ಹೋಗಬಾರದು: ಮಹಾರಾಷ್ಟ್ರ ಸಂಸದ ಡಾ.ಅಮೋಲ್ ಕೋಲ್ಹೆ
ಬೆಳಗಾವಿ(ಜ.14): ಕರ್ನಾಟಕ ಹಾಗೂ ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ. ಈ ಪ್ರದೇಶದಲ್ಲಿರುವ ಪ್ರತಿಯೊಬ್ಬರಿಗೆ ತಾಯಿ ಪ್ರೀತಿ ಇದ್ದಷ್ಟು ಚಿಕ್ಕಮ್ಮನ ಪ್ರೀತಿಯೂ ಸಿಗುತ್ತದೆ ಎಂದು ಖ್ಯಾತ ನಟ, ಮಹಾರಾಷ್ಟ್ರ ಸಂಸದ ಡಾ.ಅಮೋಲ್ ಕೋಲ್ಹೆ ಹೇಳಿದರು.
ಇಂದು(ಶನಿವಾರ) ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಬಹುಜನ ಸಮಾಜ, ಕಡೋಲಿಯ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಹಾಗೂ ಕಡೋಲಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಸ್ವರಾಜ ಸಂಕಲ್ಪ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಬೆಳಗಾವಿ: ಕನ್ನಡಿಗರ ಕಿಡಿಗೆ ಬೆಚ್ಚಿದ ಎಂಇಎಸ್ ಪುಂಡರು ಮಹಾರಾಷ್ಟ್ರಕ್ಕೆ ಪಲಾಯನ..!
ಪ್ರೀತಿ ಹಾಗೂ ಶಿವಭಕ್ತಿಗೆ ಗಡಿ ಇರುವುದಿಲ್ಲ. ಇಂಥ ಒಂದು ಬಾಂಧವ್ಯ, ಅನ್ಯೋನ್ಯತೆಯ ಪ್ರದೇಶ ಇದು. ಇವು ಗಡಿ ಮೀರಿ ವ್ಯಾಪಿಸಿಕೊಂಡಿವೆ. ಈ ಎರಡೂ ರಾಜ್ಯಗಳು ರಾಷ್ಟ್ರದ ಪ್ರತೀಕ. ಮಾತೃಭಾಷೆಯ ಅಭಿಮಾನ ಇರಬೇಕು. ಅದು ಅತಿರೇಕಕ್ಕೆ ಹೋಗಬಾರದು. ಎಲ್ಲರೂ ಪ್ರೀತಿ ಸಹಬಾಳ್ವೆಯಿಂದ ಭಾಷೆಯನ್ನು ಗೌರವಿಸಬೇಕು ಮತ್ತು ಪ್ರೀತಿಸಬೇಕೆಂದು ಸಲಹೆ ನೀಡಿದರು.