ಚಾಮುಂಡಿ ಬೆಟ್ಟದ ದೆವ್ವಕ್ಕೆ ದೇವರ ಪಟ್ಟ ಕಟ್ಟಲಾಗ್ತಿದೆ: ಮಹಿಷ ದಸರಾ ತಡೆಯಲು ಅ.13 ಚಾಮುಂಡಿ ಚಲೋ!

By Sathish Kumar KH  |  First Published Oct 4, 2023, 12:36 PM IST

ಚಾಮುಂಡಿ ಬೆಟ್ಟಕ್ಕೆ ಹೋಗಿ ದೆವ್ವವನ್ನ ದೇವರು ಅಂತ, ದೇವರನ್ನ ದೆವ್ವವೆಂದು ಹೇಳಲಾಗುತ್ತಿದೆ. ಮಹಿಷ ದಸರಾ ತಡೆಯಲು ಅ.13ರ ಚಾಮುಂಡಿ ಚಲೋದಲ್ಲಿ ಭಾಗವಹಿಸುವಂತೆ ಮನವಿ.


ಮೈಸೂರು (ಅ.04): ಮೈಸೂರು ಜನರಿಗೆ ದಸರಾ ಅಂದ್ರೆ ಏನು, ನವರಾತ್ರಿ ಅಂದ್ರೆ ಏನು ಅಂತ ಗೊತ್ತು. 2015-16 ರಲ್ಲಿ ಮಹಿಷ ದಸರಾ ಎನ್ನುವ ಅಸಹ್ಯ ಹುಟ್ಟುಹಾಕಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಹೋಗಿ ದೆವ್ವವನ್ನ ದೇವರು ಅಂತ, ದೇವರನ್ನ ದೆವ್ವ ಅಂತ ಹೇಳುವ ಕೆಲಸವಾಗಿದೆ. ಆದರೆ, ಈ ಬಾರಿಯೂ ಮಹೊಷ ದಸರಾ ಮಾಡಲು ಮುಂದಾಗಿದ್ದು, ಇದನ್ನು ತಡೆಯಲು ಅ.13ರಂದು ಚಾಮುಂಡಿ ಚಲೋ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟಿಪ್ಪು, ಹೈದರಾಲಿ ಕಾಲ ಬಿಟ್ಟರೆ 414 ವರ್ಷದಿಂದ ನಿರಂತರವಾಗಿ ಮೈಸೂರು ದಸರಾ ನಡೆದುಕೊಂಡಿ ಬರುತ್ತಿದೆ. ಮೈಸೂರು ಜನರಿಗೆ ದಸರಾ ಅಂದ್ರೆ ಏನು, ನವರಾತ್ರಿ ಅಂದ್ರೆ ಏನು ಅಂತ ಗೊತ್ತು. 2015-16 ರಲ್ಲಿ ಮಹಿಷ ದಸರಾ ಎನ್ನುವ ಅಸಹ್ಯ ಹುಟ್ಟುಹಾಕಿದ್ದಾರೆ. ಆಗ ಇದ್ದವರು ಉದಾಸೀನ ತೋರಿದ್ದರು. ಚಾಮುಂಡಿ ಬೆಟ್ಟಕ್ಕೆ ಹೋಗಿ ದೆವ್ವವನ್ನ ದೇವರು ಅಂತ, ದೇವರನ್ನ ದೆವ್ವ ಅಂತ ಹೇಳುವ ಕೆಲಸ ಆಯ್ತು. ನಂತರ ಮೆರವಣಿಗೆ ಮಾಡಲಾಯಿತು. ಆಗಿನ ಸಿಎಂ ಸಿದ್ದರಾಮಯ್ಯ ಸರ್ಕಾರ ಅದನ್ನ ನಿಲ್ಲಿಸಲಿಲ್ಲ ಎಂದು ಕಿಡಿಕಾರಿದರು.

Latest Videos

undefined

ಕರ್ನಾಟಕದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ: ಸರ್ಕಾರ ಕೆಣಕಿದ ಸಂಸದ ಪ್ರತಾಪ್‌ ಸಿಂಹ

ಮೈಸೂರಿನ ಭಕ್ತರ ಭಾವನೆಗೆ ನೋವಾಗುವ ಅಸಹ್ಯವನ್ನು ನಿಲ್ಲಿಸುವ ಮನವಿಗೆ ಸಚಿವ ಸೋಮಣ್ಣ ಸ್ಪಂದಿಸಿ ನಿಲ್ಲಿಸಲು ನಾಂದಿ ಹಾಡಿದರು. ಈ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿ ಇಂತಹ ಅಸಹ್ಯವನ್ನು ಮಟ್ಟ ಹಾಕುವ ಕೆಲಸ ಮಾಡಿದ್ದರು. ಈಗ ಸಿದ್ದರಾಮಯ್ಯ ಸರ್ಕಾರ ಬಂದಾಗ ಅವರು ಮತ್ತೆ ಹೆಚ್ಚಿಕೊಂಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ಆಚರಣೆ ಮಾಡುವ ಮಾತು ಆಡುತ್ತಿದ್ದಾರೆ. ಇದನ್ನ ತಡೆಯುವ ನಿಟ್ಟಿನಲ್ಲಿ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥ ನಡೆಸುತ್ತೇವೆ ಎಂದು ಹೇಳಿದರು.

ಮಹಿಷ ದಸರಾ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮದಲ್ಲಿ 5 ಸಾವಿರ‌ ನಾಗರೀಕರು ಪಾಲ್ಗೊಳ್ಳುತ್ತಾರೆ. ಚಾಮುಂಡಿ ಬೆಟ್ಟದ ಪಾದ ಹಾಗೂ ವಿಶ್ವವಿದ್ಯಾಲಯದ ಆವರಣದಿಂದ ಜನ ತೆರಳುತ್ತಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಗೆ ಪೂಜೆ ಸಲ್ಲಿಸಿ ದಿನವಿಡಿ ಕಾರ್ಯಕ್ರಮ ನಡೆಸುತ್ತೇವೆ. ಜಿಲ್ಲಾಧಿಕಾರಿ ಹಾಗು ಸಿಟಿ ಪೊಲೀಸ್ ಕಮಿಷನರ್‌ ಬಳಿ ತೆರಳಿ ಮಹಿಷ ದಸರಾಗೆ ಅನುಮತಿ ನೀಡದಂತೆ ಮನವಿ ಮಾಡುತ್ತೇವೆ. ಇದು ಭಾರತೀಯ ಜನತಾ ಪಕ್ಷದ ಕಾರ್ಯಕ್ರಮ ಅಲ್ಲ. ಮತ್ತೆ ಮಹಿಷ ದಸರಾ ತಡೆಗಟ್ಟುವ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ಚಾಮುಂಡಿ ಚಲೋದಲ್ಲಿ ಮೈಸೂರಿನ ಎಲ್ಲಾ ಪ್ರಜ್ಞಾವಂತ ನಾಗರೀಕರು ಭಾಗಿಯಾಗಲಿದ್ದಾರೆ. ಬಹುಸಂಖ್ಯಾತರ ಭಾವನೆ ರಕ್ಷಣೆ ಮಾಡುವ ಕೆಲಸ ಮಾಡೊಣ. ಅಕ್ಟೋಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋ ನಡೆಯುತ್ತದೆ. ಮಹಿಷಾ ದಸರಾವನ್ನ ತಡೆಯುವುದೇ ನಮ್ಮ ಉದ್ದೇಶವಾಗಿದೆ. ಇದಕ್ಕಾಗಿ ನಾವು ಸಂಘರ್ಷಕ್ಕೂ ನಾವು ಸಿದ್ದರಿದ್ದೇವೆ. ಮೈಸೂರು‌ ಜಿಲ್ಲೆಯ‌ 11 ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ. ಧರ್ಮಾತೀತವಾಗಿ ಎಲ್ಲರಿಗೂ ಕರೆ ಕೊಡುತ್ತಿದ್ದೇವೆ ಎಂದು ತಿಳಿಸಿದರು.

ವೀರಶೈವ ಲಿಂಗಾಯತರಿಗೆ ಬಂಪರ್‌ ಗಿಫ್ಟ್‌: ಶೈಕ್ಷಣಿಕ, ಸ್ವಯಂ ಉದ್ಯೋಗ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ

ಚಾಮುಂಡಿ ತಾಯಿ ನಿಮ್ಮ ತಾಯಿ ಅಲ್ವಾ? 
ಮಹಿಷಾ ದಸರಾ ತಡೆಯಲು ಚಾಮುಂಡಿ ಚಲೋ ಕಾರ್ಯಕ್ರಮದಲ್ಲಿ ಬೈಕ್, ಕಾರು ಮುಂತಾದ ವಾಹನದ ಮೂಲಕ ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು. ಇದು ಚಾಮುಂಡಿ ತಾಯಿಯ ಭಕ್ತರ ಚಳವಳಿ. ಮೈಸೂರಿನ ಜನ ಕಷ್ಟ- ಸುಖ ಎಲ್ಲದಕ್ಕೂ ಚಾಮುಂಡಿ ಬೆಟ್ಟಕ್ಕೆ ಓಡಿ ಹೋಗ್ತೀರಿ. ಯಾರೋ ನಾಲ್ಕೋ ಜನ ಮಹಿಷ ದಸರಾ ಮಾಡ್ತಾರೆ. ಚಾಮುಂಡಿ ನಿಮ್ಮ ತಾಯಿ ಅಲ್ವ? ಆಕೆಗೆ ಅಪಮಾನ ಆಗುವಾಗ ನಿಮಗೆ ಸಿಟ್ಟು ಬರಲ್ವ? ಮೈಸೂರಿಗರೇ ಪಕ್ಷ, ಸಿದ್ಧಾಂತ ಭೇದವಿಲ್ಲದ ನಮ್ಮ ಚಳವಳಿಗೆ ಬೆಂಬಲ ಕೊಡಿ ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು.

click me!