ವಿಜಯಪುರದಲ್ಲಿ ವಿಮಾನ ನಿಲ್ದಾಣ ಖಚಿತ: ಸಂಸದ ಜಿಗಜಿಣಗಿ

Published : Sep 21, 2019, 11:29 AM ISTUpdated : Sep 21, 2019, 12:05 PM IST
ವಿಜಯಪುರದಲ್ಲಿ ವಿಮಾನ ನಿಲ್ದಾಣ ಖಚಿತ: ಸಂಸದ ಜಿಗಜಿಣಗಿ

ಸಾರಾಂಶ

ವಿಜಯಪುರದ ವಿಮಾನ ನಿಲ್ದಾಣ ಬುರಾಣಪುರದಲ್ಲಿಯೇ ನಿರ್ಮಾಣ ಎಂದ ಸಂಸದ ಜಿಗಜಿಣಗಿ| ಸ್ಥಳದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಈಗ ತೆರೆ ಬಿದ್ದಿದೆ| ಈ ಸಂಬಂಧ ಡಿಸಿಎಂ ಗೋವಿಂದ ಕಾರಜೋಳ ಅವರ ಜೊತೆಗೆ ಮಾತನಾಡಿದ್ದೇನೆ: ಜಿಗಜಿಣಗಿ| 

ವಿಜಯಪುರ:(ಸೆ.21) ಬಹುಕಾಲದ ಬೇಡಿಕೆಯಾಗಿರುವ ವಿಜಯಪುರ ವಿಮಾನ ನಿಲ್ದಾಣವನ್ನು ಬುರಾಣಪುರದಲ್ಲಿರುವ ನಿಯೋಜಿತ ಸ್ಥಳದಲ್ಲಿಯೇ ನಿರ್ಮಿಸುವುದು ಖಚಿತ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. 


ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಳವಾಡ ಬಳಿ ಕೆಐಡಿಬಿ ವತಿಯಿಂದ ಸ್ವಾಧೀನಪಡಿಸಿಕೊಳ್ಳಲಾದ ಸ್ಥಳದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಈಗ ತೆರೆ ಬಿದ್ದಿದ್ದು, ಬುರಣಾಪುರದಲ್ಲಿಯೇ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ನಿರ್ಮಾಣ ಆಗಲಿದೆ ಎಂದು ಹೇಳಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 


ಡಿಸಿಎಂ ಗೋವಿಂದ ಕಾರಜೋಳ ಅವರ ಜೊತೆಗೆ ಈ ಸಂಬಂಧ ಮಾತನಾಡಿದ್ದು ಬುರಣಾಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಅಗತ್ಯತೆ ಮನವರಿಕೆ ಮಾಡಿದ್ದೇನೆ. ಅದಕ್ಕೆ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಸಚಿವಾಲಯಕ್ಕೆ ಪತ್ರ ಬರೆದಿದ್ದೇನೆ ಎಂದರು.

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು