
ಬೆಂಗಳೂರು (ಜು.04): ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಭಾಗವಾಗಿರುವ ಮೂಡಿಗೆರೆ ವಿಧಾನಸಭಾ ಶಾಸಕಿ ನಯನಾ ಮೋಟಮ್ಮ ಅವರು ಕಳಸ ಪಟ್ಟಣಕ್ಕೆ ಒಂದು ಇಂದಿರಾ ಕ್ಯಾಂಟೀನ್ ಮಂಜೂರು ಮಾಡುವಂತೆ ಕೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶ ಕೊಟ್ಟಿದ್ದರು. ಇನ್ನು ಜುಲೈ 15ರಿಂದ ಸದನ ಪ್ರಾರಂಭವಾಗುತ್ತಿದೆ. ಅದರ ಬಗ್ಗೆ ಸಿಎಂ ಅವರೊಂದಿಗೆ ಜೊತೆ ಮಾತನಾಡಿದ್ದೇನೆ. ನಮ್ಮ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಕಾರ್ಮಿಕರು ಕೆಲಸ ಮಾಡುವ ಪಟ್ಟಣದವಾದ ಕಳಸದಲ್ಲಿ ಇಂದಿರಾ ಕ್ಯಾಂಟೀನ್ ಮಂಜೂರು ಮಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸ್ವಾಮಿ ವಿವೇಕಾನಂದರಿಗೆ ಅವಮಾನ; ಸಿಎಂ ಸಿದ್ದರಾಮಯ್ಯ ಆರೋಪ
ಇಂದಿರಾ ಕ್ಯಾಂಟೀನ್ ಸ್ಥಾಪನೆಯ ಮೂಲ ಉದ್ದೇಶವೇ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ಹಣಕ್ಕೆ ಹೊಟ್ಟೆ ತುಂಬಾ ಆಹಾರ ನೀಡುವುದಾಗಿದೆ. ಇನ್ನು ನಮ್ಮ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರು ಹೆಚ್ಚಿರುವ ಹಿನ್ನೆಲೆಯಲ್ಲಿ ಕಳಸ ಪಟ್ಟಣಕ್ಕೆ ಒಂದು ಇಂದಿರಾ ಕ್ಯಾಂಟೀನ್ ಕೇಳಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ನಮಗೆ ಸಿಗ್ತಾರೆ. ಕ್ಷೇತ್ರಕ್ಕೆ ಅನುದಾನ ಸಿಗುತ್ತದೆ. ಲೋಕಸಭಾ ಚುನಾವಣೆಗೂ ಮುನ್ನ ವಿಶೇಷ ಅನುದಾನ ಸಿಕ್ಕಿದೆ. ಆರ್ ಡಿಪಿಆರ್ ಅನುದಾನವೂ ನಮಗೆ ಸಿಕ್ಕಿದೆ. ನಮ್ಮ ಕ್ಷೇತ್ರಕ್ಕೆ ಯಾವುದೇ ಅನುದಾನ ಕೊರತೆಯಾಗಿಲ್ಲ ಎಂದು ಹೇಳಿದರು.
ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರ ನಿಷೇಧಿಸಿದ ಸರ್ಕಾರ; ಎಲ್ಲೇ ಕಂಡರೂ ಸೀಜ್ ಮಾಡೋದು ಖಚಿತ
ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯ ಕಾಂಗ್ರೆಸ್ ಪಕ್ಷದ 46ಕ್ಕೂ ಹೆಚ್ಚು ಹಾಲಿ ಮತ್ತು ಮಾಜಿ ಶಾಸಕರು ಭೇಟಿಯಾಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ಶಾಸಕರ ಭೇಟಿಗೆ ಸಮಯ ಅವಕಾಶ ನೀಡಿದ್ದರು. ಹಾಲಿ ಮತ್ತು ಮಾಜಿ ಶಾಸಕರು ಮತ್ತು ಎಂಪಿಗಳು ಇಂದು ಸಿಎಂ ಭೇಟಿಯಾಗಿ ಚರ್ಚೆ ನಡೆಸಿದರು. ಕ್ಷೇತ್ರದ ಅಭಿವೃದ್ಧಿ ವಿಚಾರದ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿದ್ದಾರೆ. ಕ್ಷೇತ್ರಕ್ಕೆ ವಿಶೇಷ ಅನುದಾನದ ಬಗ್ಗೆ ಸಿಎಂ ಜೊತೆಗೆ ಶಾಸಕರು ಚರ್ಚೆ ನಡೆಸಿದರು. ಎಲ್ಲರಿಗೂ ಹಂತ ಹಂತವಾಗಿ ತಮ್ಮ ಬೇಡಿಕೆ ಈಡಿರಿಸೋ ಬಗ್ಗೆ ಸಿಎಂ ಭರವಸೆ ನೀಡಿದರು. ಗ್ರೆಸ್ ಶಾಸಕರಷ್ಟೇ ಅಲ್ಲದೇ ತುರುವೇಕೆರೆ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಸಹ ಸಿಎಂ ಭೇಟಿ ಮಾಡಿದ್ದಾರೆ.