: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶನಿವಾರ ಬೆಳಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಮಂಗಳೂರು (ಜೂ.18) : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶನಿವಾರ ಬೆಳಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
2013ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ಮುಲ್ಲೈ ಮುಗಿಲನ್ ಅವರು ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಚ್ ಗವರ್ನ®್ಸ…ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು. ಅದಕ್ಕೂ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಮಕ್ಕಳ ರಕ್ಷಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು: ಡಿಸಿ ಮುಗಿಲನ್
ಆಡಳಿತದಲ್ಲಿ ಸಮನ್ವಯತೆ: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ತನ್ನದೇ ರೀತಿಯಲ್ಲಿ ವಿಶಿಷ್ಟವಾದ ಜಿಲ್ಲೆ. ಇಲ್ಲಿ ಕೆಲಸ ಮಾಡೋದು ಉತ್ತಮ ಅವಕಾಶ ಅಂತ ಭಾವಿಸಿಕೊಂಡಿದ್ದೇನೆ. ಇಲ್ಲಿ ಅವಕಾಶಗಳು ಸಾಕಷ್ಟಿವೆ. ಇಲ್ಲಿನ ಜನರು ಹಲವು ರೀತಿಯ ಚಿಂತನೆ ಇರುವವರು. ನಮ್ಮ ಕೆಲಸ- ಇಲ್ಲಿನ ಸಂಪನ್ಮೂಲಗಳ ಕ್ರೋಢೀಕರಣ ಮತ್ತು ಆಡಳಿತದಲ್ಲಿ ಸಮನ್ವಯತೆ ಸಾಧಿಸುವುದು. ವೈಯಕ್ತಿಕವಾಗಿಯೂ, ವೃತ್ತಿಜೀವನದಲ್ಲೂ ಈ ಜಿಲ್ಲೆಯಲ್ಲಿ ಕೆಲಸ ಮಾಡೋದು ಒಂದು ಮೈಲಿಗಲ್ಲು ಅಂದುಕೊಂಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಜಿಲ್ಲೆಯಲ್ಲಿ ಕೋಮು ಸಾಮರಸ್ಯ ನೆಲೆಗೊಳಿಸುವ ಸವಾಲಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಮುಲ್ಲೈ ಮುಗಿಲನ್, ಇದು ಬಹಳಷ್ಟುಅವಕಾಶಗಳು ತುಂಬಿರುವ ಜಿಲ್ಲೆ. ಅನೇಕ ಉದ್ಯಮಗಳಿವೆ, ಸಂಸ್ಥೆಗಳಿವೆ. ಆರೋಗ್ಯ ಕ್ಷೇತ್ರದಲ್ಲಿ ದೇಶದ ಹೆಲ್ತ್‌ಕೇರ್ ಸೆಂಟರ್ ಆಗಬಹುದಾದ ಸಾಧ್ಯತೆ ಇರುವ ಜಿಲ್ಲೆ. ಇಲ್ಲಿನ ಸಮನ್ವಯತೆಯ ಕೊರತೆಗಳನ್ನು ಸರಿದೂಗಿಸಿಕೊಂಡು ಹೋಗಬೇಕಿದೆ. ಜಿಲ್ಲೆಯ ಜನರ ಜತೆ ಸಂಪರ್ಕದಲ್ಲಿದ್ದುಕೊಂಡು ಎಲ್ಲರ ಅಭಿಪ್ರಾಯಗಳನ್ನು ಪಡೆದು ಸಮನ್ವಯದ ಕೊರತೆಯನ್ನು ಸರಿಪಡಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ಎಲ್ಲರೂ Ayushman Bharat Card ಪಡೆಯಲಿ -ಡಿಸಿ ಮುಗಿಲನ್