ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರೂರು ಗುಡ್ಡ ಕುಸಿತದ ಬೆನ್ನಲ್ಲಿಯೇ ಮುಂಡಗೋಡದ ಧರ್ಮಾ ಜಲಾಶಯದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಉತ್ತರ ಕನ್ನಡ (ಜು.25): ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರೂರು ಗುಡ್ಡ ಕುಸಿತದ ಬೆನ್ನಲ್ಲಿಯೇ ಮುಂಡಗೋಡದ ಧರ್ಮಾ ಜಲಾಶಯದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ರಾಜ್ಯ ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ರಣಭೀಕರ ಮಳೆಯಿಂದಾಗಿ ಮೇಲಿಂದ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ಶಿರೂರು ಗುಡ್ಡ ಕುಸಿತಕ್ಕೆ ಸಿಲುಕಿ ಒಂದೇ ಸ್ಥಳದಲ್ಲಿ 11 ಜನರು ದುರ್ಮಣಕ್ಕೀಡಾಗಿದ್ದಾರೆ. ನಿನ್ನೆ ರಸ್ತೆಯಲ್ಲಿ ಹೋಗುತ್ತಿದ್ದ ಸ್ಕೂಟರ್ ಮೇಲೆ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ಮತ್ತೊಬ್ಬ ಯುವಕ ರಣಭೀಕರ ಮಳೆಗೆ ಬಲಿಯಾಗಿದ್ದಾನೆ.
undefined
ಹೌದು, ಉತ್ತರಕನ್ನಡ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ರಣಭೀಕರ ಮಳೆಯಿಂದಾಗಿ ಮನೆಯಿಂದ ಹೊರಗೆ ಹೋದವರು ಮನೆಗೆ ಜೀವಂತವಾಗಿ ವಾಪಸ್ ಬರುತ್ತಾರೆಯೋ ಇಲ್ಲವೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಸಾಮಾನ್ಯವಾಗಿ ವಾಹನಗಳಲ್ಲಿ ಹೋಗುವಾಗ, ನಡೆದುಕೊಂಡು ಹೋಗುವಾಗ ಆಕಸ್ಮಿಕ ದುರ್ಘಟನೆಗಳು ಸಂಭವಿಸಿ ಸಾವಿಗೀಡಾಗುತ್ತಿದ್ದಾರೆ. ಅಂಥದ್ದರಲ್ಲಿ ಇಲ್ಲೊಬ್ಬ ಯುವಕ ಭಾರಿ ಮಳೆಯಿಂದಾಗು ತುಂಬಿ ಹರಿಯುತ್ತಿದ್ದ ನದಿಯಲ್ಲಿ ಈಜಾಡಲು ಹೋಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಶಿರೂರು ಗುಡ್ಡ ಕುಸಿತ ಸಾವಿನ ಸಂಖ್ಯೆ 11ಕ್ಕೆ ಏರಿಕೆ; ಕೇರಳ ಮಾತ್ರವಲ್ಲ, ತಮಿಳುನಾಡು ಲಾರಿ ಚಾಲಕನೂ ನಾಪತ್ತೆ!
ಮುಂಡಗೋಡ ತಾಲ್ಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ಮುಳುಗಿ ಸಾವಿಗೀಡಾಗಿದ್ದಾನೆ. ಮೃತನನ್ನು ಶ್ರೀಕಾಂತ ಹರಿಜನ (20) ಎಂದು ಗುರುತಿಸಲಾಗಿದೆ. ಮುಂಡಗೋಡ ತಾಲೂಕಿನ ಮುಡಸಾಲಿ ಗ್ರಾಮದ ನಿವಾಸಿಯಾಗಿದ್ದ ಶ್ರೀಕಾಂತ, ನಿನ್ನೆ 8 ಮಂದಿ ಸ್ನೇಹಿತರೊಂದಿಗೆ ಸೇರಿ ಕೋಡಿ ಬಿದ್ದ ಧರ್ಮಾ ಜಲಾಶಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಸ್ನೇಹಿತನೊಂದಿಗೆ ನೀರಲ್ಲಿ ಈಜಲು ತೆರಳಿದ್ದಾನೆ. ಆದರೆ, ನೀರಿಗಿಳದ ವೇಳೆ ಕಾಲು ಕೆಸರಿನಲ್ಲಿ ಸಿಲುಕಿ ನೀರಿನಿಂದ ಮೇಲಕ್ಕೆ ಬಾರದೇ ಕಣ್ಮರೆಯಾಗಿದ್ದಾನೆ.
Breaking: ನಟ ದರ್ಶನ್ ಮನೆ ಊಟ ಕೊಡುವಂತೆ ಸಲ್ಲಿಸಿದ್ದ ಅರ್ಜಿ ವಜಾ; ಜೈಲೂಟವೇ ಗತಿ
ಇದಾದ ನಂತರ ಆತಂಕಕ್ಕೆ ಒಳಗಾದ ಆತನ ಸ್ನೇಹಿತರು ಶ್ರೀಕಾಂತನನ್ನು ಹುಡುಕಲು ಮುಂದಾಗಿದ್ದಾರೆ. ಆದರೆ, ಎಲ್ಲಿಯೂ ಶ್ರೀಕಾಂತ ಪತ್ತೆಯಾಗದ ಹಿನ್ನೆಲೆಯಲ್ಲಿ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ, ಮನೆಯವರು ಸ್ಥಳಕ್ಕೆ ಬಂದು ಶ್ರೀಕಾಂತನಿಗಾಗಿ ಶೋಧ ಕಾರ್ಯ ಮಾಡಿದ್ದಾರೆ. ಆಗಲೂ ಸಿಗದಿರುವಾಗ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ, ನೀರಿನಲ್ಲಿ ಮುಳುಗಿದ ಯುವಕನನ್ನು ರಕ್ಷಣೆ ಮಾಡುವಂತೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜೀವರಕ್ಷಕ ಸಿಬ್ಬಂದಿ ನೀರಿನಲ್ಲಿ ಮುಳುಗಿದ್ದ ಶ್ರೀಕಾಂತನ ಶವ ಪತ್ತೆ ಮಾಡಿದ್ದಾರೆ. ಈ ಘಟನೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.