ಮುನಿರತ್ನ ಹೆಸರು ಕೈಬಿಟ್ಟಿದ್ದಕ್ಕೆ ಬಿಜೆಪಿ ಮುಖಂಡನಿಂದ ಕೋರ್ಟ್ ಗೆ ಮೊರೆ

By Kannadaprabha NewsFirst Published Sep 20, 2019, 9:15 AM IST
Highlights

ಸಾವಿರಾರು ನಕಲಿ ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣದಲ್ಲಿ ಅನರ್ಹ ಶಾಸಕ ಮುನಿರತ್ನ ಅವರ ಹೆಸರು ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಹಾಗೂ ಪರಾಜಿತ ಅಭ್ಯರ್ಥಿ ಪಿ.ಎಂ.ಮುನಿರಾಜುಗೌಡ ಕೋರ್ಟ್‌ ಮೆಟ್ಟಿಲೇರಿದ್ದಾರೆ.
 

ಬೆಂಗಳೂರು [ಸೆ.20]:  ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಾವಿರಾರು ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣದಲ್ಲಿ ಅನರ್ಹ ಶಾಸಕ ಮುನಿರತ್ನ ಅವರ ಹೆಸರು ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಹಾಗೂ ಪರಾಜಿತ ಅಭ್ಯರ್ಥಿ ಪಿ.ಎಂ.ಮುನಿರಾಜುಗೌಡ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪ್ರಕರಣದಲ್ಲಿ ಮುನಿರತ್ನ ಅವರನ್ನು ಆರೋಪಿಯಾಗಿ ವಿಚಾರಣೆ ನಡೆಸಬೇಕು ಎಂದು ಏಳನೇ ಎಸಿಎಂಎಂ ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸ್ವೀಕರಿಸಿರುವ ನ್ಯಾಯಾಲಯ ವಿಚಾರಣೆಯನ್ನು ಅ.17ಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಜಾಲಹಳ್ಳಿ ಪೊಲೀಸರು ದೋಷಾರೋಪ ಪಟ್ಟಿಸಲ್ಲಿಸುವ ವೇಳೆ ಮುನಿರತ್ನ ಅವರ ಹೆಸರು ಕೈ ಬಿಟ್ಟಿದ್ದಾರೆ. ಪ್ರಕರಣದಲ್ಲಿ ಮುನಿರತ್ನ ಅವರು ಸಂಪೂರ್ಣ ಭಾಗಿಯಾಗಿರುವ ಬಗ್ಗೆ ಸಾಕಷ್ಟುಪುರಾವೆಗಳಿವೆ. ಈಗಾಗಿ ಪ್ರಕರಣದಲ್ಲಿ ಮುನಿರತ್ನ ಅವರನ್ನು ಆರೋಪಿಯನ್ನಾಗಿ ವಿಚಾರಣೆ ನಡೆಸುವಂತೆ ಮುನಿರಾಜು ಗೌಡ ಅವರು ಮನವಿ ಮಾಡಿದ್ದಾರೆ.

ನ್ಯಾಯಾಲಯದಲ್ಲಿ ಹೋರಾಟ : ಮುನಿರಾಜುಗೌಡ

ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಗುರುತಿನ ಚೀಟಿ ಸಿಕ್ಕ ಪ್ರಕರಣದಲ್ಲಿ ಜಾಲಹಳ್ಳಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಶಾಸಕ ಮುನಿರತ್ನ ಅವರ ಹೆಸರು ಕೈ ಬಿಟ್ಟಿರುವುದರ ಬಗ್ಗೆ ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡ ಪಿ.ಎಂ.ಮುನಿರಾಜು ಗೌಡ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಮುನಿರತ್ನ ಅವರು ಆರೋಪಿ ಎಂಬುದನ್ನು ಸಾಬೀತುಪಡಿಸಲು ನಮ್ಮ ಬಳಿ ಸಾಕಷ್ಟುಪುರಾವೆಗಳಿವೆ. ಬಿಜೆಪಿ ಕಾರ್ಯಕರ್ತ ರಾಕೇಶ್‌ ಎಂಬುವವರು ಪ್ರಕರಣದ ಬಗ್ಗೆ ದೂರು ನೀಡಿದ್ದರು. ಮುನಿರತ್ನ ಹಾಗೂ ಪಾಲಿಕೆ ಸದಸ್ಯರಾದ ವೇಲುನಾಯಕ್‌, ವೆಂಕಟೇಶ್‌, ದೂರುದಾರ ರಾಕೇಶ್‌ನನ್ನು ಅಪಹರಣ ಮಾಡಿ ಬೆದರಿಸಿ ಪ್ರಕರಣದಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ಥಳದಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಪತ್ತೆಯಾಗಿತ್ತು. ಮುನಿರತ್ನ ಅವರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇಡೀ ಪೊಲೀಸ್‌ ಸಿಬ್ಬಂದಿ ಆರೋಪಿ ಮುನಿರತ್ನ ಅವರ ಬೆಂಬಲಕ್ಕೆ ನಿಂತಿದೆ. ಬೇರೆ ಅವರನ್ನು ಪ್ರಕರಣದಲ್ಲಿ ಸಿಲುಕಿಸಿ ಪ್ರಮುಖ ಆರೋಪಿ ಮುನಿರತ್ನ ಅವರ ಹೆಸರನ್ನು ಕೈ ಬಿಡಲಾಗಿದೆ. ನ್ಯಾಯಾಲಯದ ಮೊರೆ ಹೋಗಿದ್ದು, ಹೋರಾಟ ಮುಂದುವರಿಸುತ್ತೇನೆ. ಪ್ರಕರಣದಲ್ಲಿ ಮುನಿರತ್ನ ನಾಯ್ದು ಅವರಿಗೆ ಶಿಕ್ಷೆ ಆಗಲೇಬೇಕು. ಯಾವುದೇ ಕಾರಣಕ್ಕೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ದಿಢೀರ್‌ ಎಸ್‌ಪಿಪಿ ವಾಪಸ್‌ :  ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಲು ಕಳೆದ ಸರ್ಕಾರ ಅವಧಿಯಲ್ಲಿ ನೇಮಕಗೊಂಡಿದ್ದ ವಿಶೇಷ ಸರಕಾರಿ ಅಭಿಯೋಜಕ (ಎಸ್‌ಪಿಪಿ) ಬಾಲಕೃಷ್ಣನ್‌ ಅವರನ್ನು ರಾಜ್ಯ ಸರಕಾರ ಹಿಂಪಡೆದಿದೆ. ಈ ಕುರಿತು ಸೆ.18ರಂದು ಸರಕಾರ ಆದೇಶ ಹೊರಡಿಸಿದೆ.

click me!