ವಿವಿಧ ವಿನಾಯಿತಿಗೆ ಕೇಂದ್ರಕ್ಕೆ ಮುರಳೀಧರ ಹಾಲಪ್ಪ ಮನವಿ

Published : Feb 15, 2024, 11:47 AM IST
ವಿವಿಧ ವಿನಾಯಿತಿಗೆ ಕೇಂದ್ರಕ್ಕೆ ಮುರಳೀಧರ ಹಾಲಪ್ಪ ಮನವಿ

ಸಾರಾಂಶ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆಗೆ ಸಮಯಾವಕಾಶ ವಿಸ್ತರಿಸಲು, ನಿಗದಿಪಡಿಸಿದ ಮೊತ್ತವನ್ನು ಕಡಿತಗೊಳಿಸಲು ಹಾಗೂ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಟೋಲ್‌ಗಳಲ್ಲಿ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

 ತುಮಕೂರು :  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆಗೆ ಸಮಯಾವಕಾಶ ವಿಸ್ತರಿಸಲು, ನಿಗದಿಪಡಿಸಿದ ಮೊತ್ತವನ್ನು ಕಡಿತಗೊಳಿಸಲು ಹಾಗೂ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಟೋಲ್‌ಗಳಲ್ಲಿ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರಸ್ತುತ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಜಿಲ್ಲಾ ಕೇಂದ್ರಗಳಿಗೆ ವಾಹನಗಳನ್ನು ತೆಗೆದುಕೊಂಡು ಹೋಗಬೇಕಾಗಿದ್ದು, ಜನ ಸಾಮಾನ್ಯರು ಕೇವಲ ನಂಬರ್‌ ಪ್ಲೇಟ್ ಅಳವಡಿಸಿಕೊಳ್ಳಲು ತಮ್ಮ ವಾಹನಗಳನ್ನು ಜಿಲ್ಲಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವುದು ಕಷ್ಟಕರವಾಗಿದೆ. ತಾಲೂಕು ಕೇಂದ್ರಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಅಲ್ಲದೇ, ಆನ್‌ಲೈನ್‌ನಲ್ಲಿ ನೋಂದಾಯಿಸಲು ಸರ್ವರ್ ಸಮಸ್ಯೆ, ಗ್ರಾಮೀಣ ಭಾಗದ ಜನರಿಗೆ ಮಾಹಿತಿ ಕೊರತೆ ಸೇರಿ ಹಲವಾರು ಸಮಸ್ಯೆಗಳಿರುವುದರಿಂದ ಸಮಯವಕಾಶ ವಿಸ್ತರಿಸಲು ಹಾಗೂ ಪ್ರಸ್ತುತ ಹೆಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆಗೆ ನಿಗದಿಪಡಿಸಿದ ಮೊತ್ತವೂ ದುಬಾರಿಯಾಗಿದ್ದು, ಇದರಿಂದಾಗಿ ಬಡ ಹಾಗೂ ಗ್ರಾಮೀಣ ಭಾಗದ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ನಿಗದಿಪಡಿಸಿದ ಮೊತ್ತದಲ್ಲಿ ಶೇ.50 ರಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರಕ್ಕೆಒತ್ತಾಯಿಸಲು ಕೋರಿದರು.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ