ಅರ್ಜುನ್‌ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

Kannadaprabha News   | Asianet News
Published : Feb 29, 2020, 09:29 AM ISTUpdated : Feb 29, 2020, 09:30 AM IST
ಅರ್ಜುನ್‌ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಾರಾಂಶ

ಲಘು ಹೃದಯಾಘಾತಕ್ಕೆ ಒಳಗಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಕನ್ನಡ ಚಲನಚಿತ್ರ ರಂಗದ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾಜ್‌ರ್‍ ಆಗಿದ್ದಾರೆ. ಅವರಿಗೆ ಲಘು ಹೃದಯಾಘಾತವಾಗಿ, ಮೈಸೂರಿನ ಅಪೋಲೋ ಬಿಜಿಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.  

ಮೈಸೂರು(ಫೆ.29): ಲಘು ಹೃದಯಾಘಾತಕ್ಕೆ ಒಳಗಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಕನ್ನಡ ಚಲನಚಿತ್ರ ರಂಗದ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾಜ್‌ರ್‍ ಆಗಿದ್ದಾರೆ. ಅವರಿಗೆ ಲಘು ಹೃದಯಾಘಾತವಾಗಿ, ಮೈಸೂರಿನ ಅಪೋಲೋ ಬಿಜಿಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ವೈದ್ಯರು ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ವಾರ್ಡ್‌ಗೆ ಸ್ಥಳಾಂತರಿಸಿದ್ದರು. ಇದೀಗ ಆರೋಗ್ಯ ಸುಧಾರಿಸಿದ್ದರಿಂದ ಡಿಸ್ಚಾಜ್‌ರ್‍ ಮಾಡಲಾಗಿದ್ದು, 15 ದಿನಗಳ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ!

ಕಳೆದ ಫೆ.23ರ ಮಧ್ಯಾಹ್ನ ಜಠರ ಸಂಬಂಧಿ ಸಮಸ್ಯೆಯಿಂದ ತಪಾಸಣೆಗೆ ಆಗಮಿಸಿದ್ದ ಅರ್ಜುನ್‌ ಜನ್ಯ ಅವರ ಇಸಿಜಿ ತಪಾಸಣೆಯಲ್ಲಿ ಅಲ್ಪ ವ್ಯತ್ಯಾಸ ಕಂಡು ಬಂದ ಕಾರಣ ಲಘು ಹೃದಯಾಘಾತವಾಗಿರುವುದು ಖಚಿತವಾಗಿತ್ತು. ತಕ್ಷಣ ಆ್ಯಂಜಿಯೋಪ್ಲಾಸ್ಟಿಶಸ್ತ್ರ ಚಿಕಿತ್ಸೆ ನೀಡಲಾಗಿತ್ತು.

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ