ಪ್ರಚೋದನಕಾರಿ ಭಾಷಣ: ರೆಡ್ಡಿ ವಿರುದ್ಧ ಬಳ್ಳಾರಿ, ಗದಗನಲ್ಲಿ ಬೃಹತ್ ಪ್ರತಿಭಟನೆ

By Suvarna NewsFirst Published Jan 4, 2020, 1:09 PM IST
Highlights

ಪ್ರಚೋದನಕಾರಿ ಭಾಷಣ| ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಮುಸ್ಮಿಂ ಸಮುದಾಯದರಿಂದ ಪ್ರತಿಭಟನೆ| ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ| ಪ್ರತಿಭಟನೆ ನಡೆಯುತ್ತಿರುವ ಸುತ್ತ ಮುತ್ತ ಪೊಲೀಸರು ಬಿಗಿ ಬಂದೋಬಸ್ತ್| ಪ್ರತಿಭಟನಾಕರರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ| ಸ್ಥಳದಲ್ಲಿ ಎಸ್ಪಿ, ಡಿಸಿ, ಎಸ್ಪಿ ಮೊಕ್ಕಾಂ|

ಬಳ್ಳಾರಿ(ಜ.04): ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಮುಸ್ಮಿಂ ಸಮುದಾಯದವರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. 

ಶುಕ್ರವಾರ ನಗರದ ರಾಯಲ್ ವೃತ್ತದಲ್ಲಿ ಸೇರಿದ ಮುಸ್ಲಿಂ ಬಾಂಧವರು ಸೋಮಶೇಖರ್ ರೆಡ್ಡಿ ಕ್ಷಮೆಯಾಚನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ಸುತ್ತ ಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಆದರೂ ಕೂಡ ಪ್ರತಿಭಟನಾಕರರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಸ್ಥಳದಲ್ಲಿ ಎಸ್ಪಿ, ಡಿಸಿ, ಎಸ್ಪಿ ಮೊಕ್ಕಾಂ ಹೂಡಿದ್ದಾರೆ.

"

ಇನ್ನು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ನಗರದ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ ಪ್ರತಿಯನ್ನು ಪ್ರತಿಭಟನಾಕಾರರಿಗೆ ತೋರಿಸಿದ್ರೂ ಪ್ರತಿಭಟನೆ ನಿಲ್ಲುತ್ತಿಲ್ಲ. ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಮುಂದಾದರೂ ಸಾಧ್ಯವಾಗುತ್ತಿಲ್ಲ. 

‘ಮುಸ್ಲಿಮರು 10 ಮಕ್ಕಳನ್ನ ಹೆತ್ತರೆ, ಹಿಂದೂಗಳು 50 ಮಕ್ಕಳಿಗೆ ಜನ್ಮ ನೀಡುತ್ತೇವೆ’

ಸೋಮಶೇಖರ್ ರೆಡ್ಡಿ ಬಂಧಿಸುವಂತೆ ಒತ್ತಾಯಿಸಿ ಆರ್‌ಎಸ್ಎಸ್ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಷವನ್ನು ಹೊರಹಾಕುತ್ತಿದ್ದಾರೆ. ಇನ್ನು ಇದೇ ವೇಳೆ ಟೈರ್‌ಗೆ ಬೆಂಕಿ ಹಚ್ಚಿ ‌ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮಶೇಖರ್ ರೆಡ್ಡಿ ಈ ಕೂಡಲೇ  ಕ್ಷಮೆಯಾಚಿಸಬೇಕು. ನಮ್ಮ ದೇಶ ಭಾರತ, ನಾವ್ಯಾಕೆ ದೇಶ ಬಿಟ್ಟು ಹೋಗಬೇಕು ಎಂದು ಸೋಮಶೇಖರ್ ರೆಡ್ಡಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. 

ಶಾಸಕ ಸೋಮಶೇಖರ್ ರೆಡ್ಡಿ ಅವರು ಪ್ರಚೋನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್. ಆಂಜನೇಯಲು ಸೇರಿದಂತೆ ನೂರಾರು ಕಾರ್ಯಕರ್ತರಿಂದ ನಗರದ ಗಾಂಧಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ವೇಳೆ ಮಾತನಾಡಿದ ಆಂಜನೇಯಲು ಪೌರತ್ವ ತಿದ್ದುಪಡಿ ಪರವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಕಾಂಗ್ರೆಸ್‌ಅನ್ನು ಬೆವಕೂಫ್ ಎಂದಿದ್ದಾರೆ.  ಪೌರತ್ವ ತಿದ್ದುಪಡಿ ಕಾಯ್ದೆ ಒಪ್ಪದವರು ದೇಶಬಿಟ್ಟು ಹೋಗಿ ಎಂದು ಪರೋಕ್ಷವಾಗಿ ಕಿಚ್ಚು ಹಚ್ಚೋ ರೀತಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾಯ್ದೆ ಬಗ್ಗೆ ವಿವರಣೆ ನೀಡೋ ಬದಲು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಗದಗ ನಗರದಲ್ಲಿಯೂ ಕೂಡ ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆದಿದೆ. ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಅಂಜುಮನ್ ಎ ಇಸ್ಲಾ ಸಂಸ್ಥೆ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಸೋಮಶೇಖರ್ ರೆಡ್ಡಿ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 
 

click me!