* ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
* ಕೆಲ ದಿನಗಳಿಂದ ತಣ್ಣಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರು
* ಹಿಜಾಬ್ ನಮ್ಮ ಹಕ್ಕು
ಶಿವಮೊಗ್ಗ(ಮಾ.09): ಹಿಜಾಬ್(Hijab) ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ಕೊಡಬೇಕೆಂದು ಒತ್ತಾಯಿಸಿ ಮುಸ್ಲಿಂ ವಿದ್ಯಾರ್ಥಿಗಳು(Muslim Students) ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ(Protest) ನಡೆಸಿದರು. ನಗರದಲ್ಲಿ ಕೆಲ ದಿನಗಳಿಂದ ತಣ್ಣಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಂಗಳವಾರ ಪ್ರತಿಭಟನೆ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು, ಈಗಾಗಲೇ ಹಲವು ದಿನಗಳಿಂದ ನಮಗೆ ತರಗತಿಗೆ ಪ್ರವೇಶ ನೀಡುತ್ತಿಲ್ಲ. ಇದರಿಂದಾಗಿ ಪಾಠ, ಪ್ರವಚನಗಳು ನಮಗೆ ಸಿಗದಂತಾಗಿದೆ. ಕೂಡಲೇ ತರಗತಿ ಪ್ರವೇಶಕ್ಕೆ ಅವಕಾಶ ಮಾಡಿ ಕೊಡಬೇಕೆಂದು ಒತ್ತಾಯಿಸಿದರು.
ಹಿಜಾಬ್ ನಮ್ಮ ಹಕ್ಕಾಗಿದೆ. ಸಂವಿಧಾನದಲ್ಲಿಯೂ(Constitution) ಕೂಡಾ ಹಿಜಾಬ್‌ಗೆ ಅವಕಾಶವಿದೆ. ಆದರೂ ಸಹ ನಾವುಗಳು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ನಮ್ಮ ಶಿಕ್ಷಣಕ್ಕೆ(Education) ತೊಂದರೆಯಾಗುತ್ತಿದೆ ಎಂದು ದೂರಿದರು.
Dress Code: ಬಣ್ಣ ಬಣ್ಣ ಬೇಡ... ಸಮವಸ್ತ್ರವೇ ಬೆಸ್ಟ್ ಎಂದ ನಿವೃತ್ತ ವಿಸಿಗಳು!
ಪೂರ್ಣ ವಸ್ತ್ರ ಸಂಹಿತೆ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಆದರೂ ಸಹ ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ತರಲು ಏಕೆ ಅವಕಾಶ ಕೊಡುತ್ತಿಲ್ಲ ಎಂಬುದು ನಮಗೆ ತಿಳಿಯುತ್ತಿಲ್ಲ. ಕೂಡಲೇ ತರಗತಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲದೆ ಅವರ ಪೋಷಕರೂ ಸಹ ಇದರಲ್ಲಿ ಪಾಲ್ಗೊಂಡಿದ್ದರು.
ಮಂಗ್ಳೂರಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿನಿಯರ ತರಗತಿ ಪ್ರವೇಶಕ್ಕೆ ತಡೆ
ಮಂಗಳೂರು: ಕೆಲವು ಸಮಯದಿಂದ ಸ್ವಲ್ಪ ತಣ್ಣಗಾಗಿದ್ದ ಹಿಜಾಬ್ ವಿವಾದ ಮಂಗಳೂರಿನಲ್ಲಿ(Mangaluru) ಮತ್ತೆ ಕಾಣಿಸಿದೆ. ಮಾ.04 ರಂದು ನಗರದ ರಥಬೀದಿಯ ಡಾ.ದಯಾನಂದ ಪೈ, ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಿಂದ ಹಿಜಾಬ್ ಸಂಘರ್ಷ ತಲೆದೋರಿತ್ತು.
ಹಿಜಾಬ್ ವಿಚಾರದಲ್ಲಿ ಗುರುವಾರವೇ ತುಸು ಗೊಂದಲ ಉಂಟಾಗಿತ್ತು. ಪ್ರಾಂಶುಪಾಲರ ಆದೇಶದಂತೆ ಮುಸ್ಲಿಂ ವಿದ್ಯಾರ್ಥಿನಿಯರು ಶುಕ್ರವಾರ ಹಿಜಾಬ್ ಧರಿಸದೆ ಸಮವಸ್ತ್ರದ ಶಾಲು ಹಾಕಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು. ಇದಕ್ಕೆ ಕೆಲವು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.
Shivaratri Controversy : ದರ್ಗಾದಲ್ಲಿ ಶಿವಲಿಂಗ ಪೂಜೆ ವಿವಾದ, ಕೂಬಾ ಕಾರಿಗೆ ಕಲ್ಲು
ವಿದ್ಯಾರ್ಥಿಗಳ ಆಕ್ಷೇಪ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತರಗತಿಗೆ ಹಾಜರಾಗಲು ಅವಕಾಶ ನೀಡಲಿಲ್ಲ. ಇದೇ ವೇಳೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಯತ್ನಿಸಿದ ಕಾರಣಕ್ಕೆ ಅಖಿಲ ಭಾತೀಯ ವಿದ್ಯಾರ್ಥಿ ಪರಿಷತ್‌ನ(ABVP) ವಿದ್ಯಾರ್ಥಿಗಳು ಕಿರುಕುಳ ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(Campus Front of India) ಸಂಘಟನೆಯ ಮಂಗಳೂರು ನಗರ ಅಧ್ಯಕ್ಷ ಶರ್ಫುದ್ದೀನ್ ನಗರ ಪೊಲೀಸ್ ಕಮಿಷನರ್‌ಗೆ ಟ್ವೀಟ್ ಮಾಡಿ ಒತ್ತಾಯಿಸಿದ್ದರು.
ಪೊಲೀಸ್ ಕಮಿಷನರ್ ಭೇಟಿ:
ಹಿಜಾಬ್ ವಿವಾದ ತಲೆದೋರಿದ ಕಾಲೇಜಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ. ಹಿಜಾಬ್ ಧರಿಸಿದ್ದನ್ನು ತರಗತಿಯ ಸಹಪಾಠಿಯೊಬ್ಬ ಪ್ರಶ್ನಿಸಿದ್ದಾನೆ. ಆತನ ವಿರುದ್ಧ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯೊಬ್ಬರು ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಹಿಜಾಬ್ ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿಯ ಫೋಟೋ ಬಳಸಿ ಅವಾಚ್ಯ ಶಬ್ದಗಳನ್ನು ಜಾಲತಾಣದಲ್ಲಿ ಹರಿಯಬಿಡಲಾಗಿದ್ದು, ಆತನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ವಿದ್ಯಾರ್ಥಿಯೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಎರಡು ದೂರುಗಳನ್ನು ಕಾನೂನಿನಡಿಯಲ್ಲಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಹಿಜಾಬ್ ಧರಿಸಿಕೊಂಡು ಪರೀಕ್ಷೆಗೆ ಹಾಜರಾಗಲು ಪ್ರಾಂಶುಪಾಲರು ಒಪ್ಪಿಗೆ ಸೂಚಿಸಿದ್ದರು ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ಆದರೆ ಪ್ರಾಂಶುಪಾಲರು ಅದನ್ನು ನಿರಾಕರಿಸಿದ್ದಾರೆ. ಈ ವಿಚಾರವನ್ನು ಕಾಲೇಜು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರೇ ಪ್ರಾಂಶುಪಾಲರ ಜತೆ ಮಾತನಾಡಲಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ಕಮಿಷನರ್ ಶಶಿಕುಮಾರ್(Shashikumar) ಸುದ್ದಿಗಾರರಿಗೆ ತಿಳಿಸಿದ್ದರು.