ನೇತ್ರಾವತಿಯಿಂದ ಭಜರಂಗದಳ ಮುಖಂಡನ ಶವ ಮೇಲಕ್ಕೆತ್ತಿದ ಮುಸ್ಲಿಂ ಯುವಕರು, ಕರಾವಳಿಯ ಸೌಹಾರ್ದತೆ ಬಗ್ಗೆ ಚರ್ಚೆ

By Gowthami K  |  First Published Jan 12, 2023, 6:35 PM IST

ನೇತ್ರಾವತಿ ನದಿಯಲ್ಲಿ ಭಜರಂಗದಳದ ಯುವಕನ ಮೃತದೇಹ ಪತ್ತೆ ಪ್ರಕರಣ ಸಂಬಂಧಿಸಿ ಸ್ಥಳೀಯ ‌ಮುಸ್ಲಿಂ ಯುವಕರ ತಂಡವೊಂದು ಮೃತದೇಹ ಮೇಲಕ್ಕೆತ್ತಿದ ವಿಚಾರವಾಘೀ ಸದ್ಯ  ಸಾಮಾಜಿಕ ತಾಣಗಳಲ್ಲಿ ಕರಾವಳಿಯ ಸೌಹಾರ್ದತೆಯ ಕುರಿತು ಚರ್ಚೆಗೆ ಕಾರಣವಾಗಿದೆ.


ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್  

ಮಂಗಳೂರು (ಜ.12): ನೇತ್ರಾವತಿ ನದಿಯಲ್ಲಿ ಭಜರಂಗದಳದ ಯುವಕನ ಮೃತದೇಹ ಪತ್ತೆ ಪ್ರಕರಣ ಸಂಬಂಧಿಸಿ ಸ್ಥಳೀಯ ‌ಮುಸ್ಲಿಂ ಯುವಕರ ತಂಡವೊಂದು ಮೃತದೇಹ ಮೇಲಕ್ಕೆತ್ತಿದ ವಿಚಾರ ಸದ್ಯ ಸಾಮಾಜಿಕ ತಾಣಗಳಲ್ಲಿ ಕರಾವಳಿಯ ಸೌಹಾರ್ದತೆಯ ಕುರಿತು ಚರ್ಚೆಗೆ ಕಾರಣವಾಗಿದೆ. ಈ ಘಟನೆ ಕರಾವಳಿಯ ಸೌಹಾರ್ದತೆಗೆ ಸಾಕ್ಷಿ ಎಂದು ಸಾಮಾಜಿಕ ತಾಣಗಳಲ್ಲಿ ಚರ್ಚೆಗಳಾಗುತ್ತಿದೆ.

Tap to resize

Latest Videos

ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26) ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಬಂಟ್ವಾಳದ ಗೂಡಿನಬಳಿಯ ಮುಸ್ಲಿಮ್ ಯುವಕರಿಗೆ ವಿಷಯ ತಿಳಿದಿದೆ. ವಿಷಯ ತಿಳಿಯುತ್ತಿದ್ದಂತೆ ಈಜು ತಜ್ಞರಾದ ಮುಹಮ್ಮದ್, ಇಬ್ರಾಹೀಂ, ಹಾರಿಸ್ ಹಾಗೂ ಇನ್ಸಾಲ್ ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಅಲ್ಲಿಗೆ ಬಂದಿದ್ದಾರೆ. ಅಗ್ನಿಶಾಮಕ ದಳದ ಬೋಟ್‌'ನಲ್ಲಿ ಮುಹಮ್ಮದ್ ಹಾಗೂ ತಂಡ ನದಿಗೆ ಇಳಿದು ಎರಡನೇ ಪಿಲ್ಲರ್ ಬಳಿ ಹುಡುಕಾಟ ನಡೆಸಿದೆ. ಬಳಿಕ ಮುಹಮ್ಮದ್ ಮತ್ತು ಇತರರು ನದಿಗೆ ಇಳಿದು ಮೃತದೇಹವನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹವನ್ನು ಬಂಟ್ವಾಳ ನಗರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

Shivamogga: ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕನಿಂದ ತಲ್ವಾರ್ ಅಟ್ಯಾಕ್, ಜಸ್ಟ್ ಮಿಸ್!

ಘಟನೆ ಹಿನ್ನೆಲೆ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26) ಮೃತದೇಹ ಪತ್ತೆಯಾಗಿತ್ತು. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆ!

ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ವ್ಯಕ್ತವಾಗಿದ್ದು, ಆತ್ಮಹತ್ಯೆ ಅಥವಾ ಅಪಘಾತವೋ ಎಂಬ ಬಗ್ಗೆ ಅನುಮಾನ ಮೂಡಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ರಾಜೇಶ್ ಸಜೀಪದ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ. ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಅಥವಾ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ. ರಾಜೇಶ್ ಭಜರಂಗದಳದ ಜವಾಬ್ದಾರಿ ಹೊಂದಿದ್ದ ಮುಖಂಡನಾಗಿದ್ದು, ಹಲವು ಸಾಮಾಜಿಕ ‌ಮತ್ತು ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

click me!