ಮೋದಿಜಿ ಅವರು ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿ. ನಮ್ಮ ಸರ್ಕಾರ ಹಿಂದುಳಿದವರ ಪರ ಇದೆ ಅನ್ನೋದನ್ನ ಸಾಬೀತು ಮಾಡಿದ್ರು ಎಂದು ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಮೈಸೂರು (ಮಾ.26): ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಸಿ ಎಂ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಹಿಂದುಳಿದ ಜಾತಿ ಜನಾಂಗ ಹಾಗೂ ಇತರೇ ಹಿಂದುಳಿದ ವರ್ಗಗಳ ಹಿತ ದೃಷ್ಟಿಯಿಂದ ಮೈಲಿಗಲ್ಲಾಗಿದೆ. ಬಿಜೆಪಿ ಸರ್ಕಾರ ಬಂದ್ರೆ ಮೀಸಲಾತಿ ತೆಗೆಯುತ್ತಾರೆ. ಸಂವಿಧಾನ ಬದಲಾಯಿಸ್ತಾರೆ ಎಂದು ಸುಳ್ಳು ಪ್ರಚಾರ ಮಾಡ್ತಿದ್ರು. ಮೋದಿಜಿ ಅವರು ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿ. ನಮ್ಮ ಸರ್ಕಾರ ಹಿಂದುಳಿದವರ ಪರ ಇದೆ ಅನ್ನೋದನ್ನ ಸಾಬೀತು ಮಾಡಿದ್ರು.
ಸಂಘ ಪರಿವಾರದವರು ಮೀಸಲಾತಿ ತೆಗೆದು ಹಾಕುತ್ತಾರೆ ಎಂದು ಸುಳ್ಳು ಹೇಳಿಕೊಂಡು ಕಾಂಗ್ರೆಸ್ ನವರು ಹೇಳಿದ್ರು. ಬಿಜೆಪಿ ಹಿಂದುಳಿದ ಜಾತಿ ಜನಾಂಗದ ಪರವಾಗಿದ್ದೇವೆ. ನಾವು ಕೇವಲ ಭಾಷಣ ಮಾಡುವುದಿಲ್ಲ. ಎಲ್ಲಾ ಸಮುದಾಯದ ಬೇಡಿಕೆಗಳನ್ನು ಸ್ಪಂದಿಸುವ ಕೆಲಸ ಮಾಡಿದ್ದೇವೆ. ಎಲ್ಲಾ ಸಮುದಾಯದ ಪರವಾಗಿ ಸಿಎಂಗೆ ಧನ್ಯವಾದ ತಿಳಿಸುತ್ತೇನೆ. ಎಲ್ಲಾ ಸಮಾಜಗಳಿಗೂ ನ್ಯಾಯ ಕೊಡುವ ಪಕ್ಷ ಬಿಜೆಪಿ. ಇದನ್ನು ಬಸವರಾಜ್ ಬೊಮ್ಮಾಯಿ ಸಾಬೀತು ಮಾಡಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಂರು 4% ಮೀಸಲಾತಿ ಪಡೆದುಕೊಂಡಿದ್ರು. ಇದು ಹಿಂದುಳಿದ ವರ್ಗಕ್ಕೆ ಸಲ್ಲಬೇಕಾದ ಮೀಸಲಾತಿಯನ್ನ ಅನಧಿಕೃತವಾಗಿ ಕೊಡಲಾಗಿತ್ತು. ಇದೀಗ ನ್ಯಾಯಯುತವಾಗಿ ಮುಸ್ಲಿಂರ ಮೀಸಲಾತಿ ತೆಗೆದು ಒಕ್ಕಲಿಗ, ವೀರಶೈವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಬರೀ ಭಾಷಣ ಮಾಡುತ್ತಿದ್ದವರಿಗೆ ಈ ಮೀಸಲಾತಿ ನಿರ್ಧಾರ ಮೂಲಕ ಅವರ ಬಾಯಿ ಮುಚ್ಚಿಸಲಾಗಿದೆ.
ವರುಣಾದಲ್ಲಿ ಸ್ಫರ್ಧೆ ಪಕ್ಷ ತೀರ್ಮಾನ ಮಾಡಿದ ಬಳಿಕ ಹೇಳುತ್ತೇನೆ: ವಿಜಯೇಂದ್ರ
ಕಾಂಗ್ರೆಸ್ ನಾ ಪ್ರಶ್ನಾತೀತ ನಾಯಕ ನಾನೇ, ಮುಂದಿನ ಸಿಎಂ ನಾನೇ ಎನ್ನುವ ಸಿದ್ದರಾಮಯ್ಯ ಗೆ ಒಂದು ಕ್ಷೇತ್ರ ಹುಡುಕಿ ಕೊಳ್ಳಲು ಆಗಲಿಲ್ಲ. ಊರಿಗೊಬ್ಳೇ ನಾನೇ ಪದ್ಮಾವತಿ ಅಂತಾ ಸಿದ್ದರಾಮಯ್ಯ ಓಡಾಡುತ್ತಿದ್ದರು. ಈಗ ಕೊನೆಗೆ ಹಳೆ ಗಂಡನ ಪಾದವೇ ಗತಿ ಅಂತಾ ವರುಣಾಗೆ ಬಂದಿದ್ದಾರೆ. ಮಗನ ನೆಲೆ ಕಳೆದು ವರುಣಾಗೆ ಬರುವ ಸ್ಥಿತಿ ಸಿದ್ದರಾಮಯ್ಯ ಗೆ ಬಂತು. ಸಿದ್ದರಾಮಯ್ಯ ಪುಕ್ಕಲತನದಿಂದ ವರುಣಾ ಕ್ಕೆ ಬರುತ್ತಿದ್ದಾರೆ. ಕಳೆದ ಬಾರಿ ಸಣ್ಣ ಅಂತರದಿಂದ ಸಿದ್ದರಾಮಯ್ಯ ಎಸ್ಕೇಪ್ ಆಗಿ ಬಿಟ್ಟಿದ್ದರು. ಸಿದ್ದರಾಮಯ್ಯ ಈ ಬಾರಿ ಎಲ್ಲೇ ನಿಂತರು ಸೋಲುತ್ತಾರೆ. ಕೋಲಾರದಲ್ಲಿ ಅವರು ನಿಲ್ಲಲ್ಲ. ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಅಂತಾ ಸಿದ್ದರಾಮಯ್ಯ ಹೇಳುತ್ತಾರೆ. ಕ್ಷೇತ್ರ ಕೊಡೋಕೆ ಹೈಕಮಾಂಡ್ ರೆಡಿ ಇಲ್ಲ ಅಂದ ಮೇಲೆ ಯಾವ ಧೈರ್ಯದ ಮೇಲೆ ಮುಂದಿನ ಸಿಎಂ ನಾನೇ ಎನ್ನುತ್ತಾರೆ?
ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಭುಗಿಲೆದ್ದ ಭಿನ್ನಮತ!
ಟಿಕೆಟ್ ಕೊಡದೆ ಇದ್ದ ಹೈಕಮಾಂಡ್ ಅವರಿಗೆ ಸಿಎಂ ಸ್ಥಾನ ಕೊಡುತ್ತಾ? 2018 ರಲ್ಲೇ ಸಿದ್ದರಾಮಯ್ಯ ರಾಜಕೀಯ ಮುಗಿದು ಹೋಗಿದೆ. ವಿಧಾನಸಭೆಗೆ ಪ್ರತಾಪ್ ಸಿಂಹ ಸ್ಪರ್ಧಿಸುತ್ತಾರೆ ಎಂಬ ವಿಚಾರ. 2029 ರವರೆಗೂ ಮೋದಿ ಅವರ ಆಡಳಿತದಲ್ಲಿ ಸಂಸದನಾಗಿ ಕೆಲಸ ಮಾಡುತ್ತೇನೆ. 8 ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸದನ ಸ್ಥಾನ ಬಿಟ್ಟು ಒಂದು ವಿಧಾನಸಭಾ ಕ್ಷೇತ್ರ ಹುಡುಕಿಕೊಳ್ಳುವಷ್ಟು ದಡ್ಡ ನಾನಲ್ಲ ಎಂದಿದ್ದಾರೆ ಪ್ರತಾಪ್ ಸಿಂಹ.